Belagavi NewsBelgaum NewsKarnataka News

*ಬ್ರೇಕ್ ನೀಡಿದ ಮಳೆರಾಯ: 8ಕ್ಕೂ ಅಧಿಕ ಜಿಲ್ಲೆಯಲ್ಲಿ ಮುಂದುವರಿಯಲಿದೆ ಒಣಹವೆ*

ಪ್ರಗತಿವಾಹಿನಿ ಸುದ್ದಿ: ಕಳೆದ ಹಲವು ತಿಂಗಳಿನಿಂದ ಸುರಿದ ಮಳೆರಾಯ ಸದ್ಯ ಬ್ರೇಕ್ ನೀಡಿದ್ದು, ಮುಂದಿನ 2-3 ದಿನ ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವೆಡೆ ಮಾತ್ರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.‌

ರಾಜ್ಯದ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಜತೆಗೆ ಮೋಡ ಕವಿದ ವಾತಾವರಣ ಸಹ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ

ಉಡುಪಿ, ಕೊಡಗು ಮತ್ತು ಉತ್ತರ ಕನ್ನಡದ ಒಂದೆರಡು ಕಡೆಗಳಲ್ಲಿ ಮಾತ್ರ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಣ್ಣ ಪ್ರಮಾಣದ ಮಳೆಯನ್ನು ನಿರೀಕ್ಷಿಸಲಾಗಿದೆ.

ಇನ್ನು ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಸಂಪೂರ್ಣವಾಗಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ

ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ ಮೈಸೂರು, ಚಾಮರಾಜನಗರ, ಕೊಡಗು, ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಮಳೆ ಸಾಧ್ಯತೆ ಕಡಿಮೆ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button