Latest

ಅಭಿಮಾನಿಗಳಲ್ಲಿ ಕ್ಷಮೆ ಕೇಳಿದ ಅಕ್ಷಯ್ ಕುಮಾರ್ ಮಹತ್ವದ ನಿರ್ಧಾರ

ಪ್ರಗತಿವಾಹಿನಿ ಸುದ್ದಿ; ಮುಂಬೈ: ಬಾಲಿವುಡ್ ನಟ ಅಕ್ಷಯ್ ಕುಮಾರ್ ಸಮಾಜಕ್ಕೆ ಉತ್ತಮ ಸಂದೇಶ ರವಾನಿಸುವ ಚಿತ್ರಗಳಲ್ಲಿ ನಟಿಸಿ ಅಭಿಮಾನಿಗಳಿಗೆ ಸ್ಪೂರ್ಥಿಯಾಗಿದ್ದ ನಟ ಇದೀಗ ಗುಟ್ಕಾ, ಪಾನ್ ಮಸಾಲಾ ಜಾಹೀರಾತಿನಲ್ಲಿ ಅಭಿನಯಿಸಿ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ವಿಮಲ್ ಪಾನ್ ಮಸಾಲಾ ಜಾಹೀರಾತಿನಲ್ಲಿ ಅಕ್ಷಯ್ ನಟಿಸಿದ್ದು, ಇದು ಅಭಿಮಾನಿಗಳ ಅಸಮಾಧಾನಕ್ಕೆ ಕಾರಣವಾಗಿದೆ. ಶಿಸ್ತಿನ ಜೀವನ, ಫಿಟ್ ನೆಸ್ ಬಗ್ಗೆ ಇತರರಿಗೆ ಮಾದರಿಯಾಗಿದ್ದ ಅಕ್ಷಯ್ ಗುಟ್ಕಾ ಜಾಹೀರಾತಿನಲ್ಲಿ ಅಭಿನಯಿಸಿದ್ದಕ್ಕೆ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ನಟ ಅಕ್ಷಯ್ ಅಭಿಮಾನಿಗಳ ಕ್ಷಮೆಯಾಚಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿರುವ ಅಕ್ಷಯ್ ಕುಮಾರ್, ನನ್ನನ್ನು ಕ್ಷಮಿಸಿ. ಆಪ್ತರಿಗೆ, ಅಭಿಮಾನಿಗಳಿಗೆ ಕ್ಷಮೆ ಕೇಳುತ್ತೇನೆ. ಕೆಲ ದಿನಗಳಿಂದ ನೀವು ನೀಡಿದ ಪ್ರತಿಕ್ರಿಯೆ ನನ್ನ ಮೇಲೆ ಆಳ ಪ್ರಭಾವ ಬೀರಿದೆ. ಇನ್ಮುಂದೆ ಯಾವುದೇ ತಂಬಾಕು ಜಾಹೀರಾತಿನಲ್ಲಿ ನಟಿಸಲ್ಲ. ವಿಮಲ್ ಎಲೈಚಿ ಸಂಸ್ಥೆಯೊಂದಿಗಿನ ನನ್ನ ಒಡನಾಟದ ಬಗ್ಗೆ ನಿಮ್ಮ ಅಭಿಪ್ರಾಯವನ್ನು ಗೌರವಿಸುತ್ತೇನೆ. ಈ ಜಾಹೀರಾತಿನಿಂದ ಹಿಂದೆ ಸರಿಯುತ್ತಿದ್ದು, ಇದರಿಂದ ಗಳಿಸಿದ ಹಣವನ್ನು ಉತ್ತಮ ಕೆಲಸಕ್ಕೆ ಉಪಯೋಗಿಸುತ್ತೇನೆ ಎಂದು ತಿಳಿಸಿದ್ದಾರೆ.

ಈಗಾಗಲೇ ಬಾಂಡ್ ಆಗಿರುವ ಕಾರಣ ಕಾನೂನು ನಿಯಮದ ಅನ್ವಯ ಈ ಜಾಹೀರಾತು ಪ್ರಸಾರ ಆಗಲಿದೆ. ಮುಂದಿನ ಜಾಹೀರಾತು ಆಯ್ಕೆ ವೇಳೆ ಸಮರ್ಪಕವಾಗಿ ಗಮನಹರಿಸುವುದಾಗಿ ತಿಳಿಸಿದ್ದಾರೆ.

Home add -Advt

ವಿಮಲ್ ಪಾನ್ ಮಸಾಲಾ ಜಾಹೀರಾತಿನಲ್ಲಿ ನಟ ಶಾರುಖ್ ಖಾನ್, ಅಜಯ್ ದೇವಗನ್ ಕೂಡ ನಟಿಸಿದ್ದು, ಇತ್ತೀಚೆಗೆ ಈ ಜಾಹೀರಾತಿನಲ್ಲಿ ಅಕ್ಷಯ್ ಕುಮಾರ್ ಕೂಡ ಕಾಣಿಸಿಕೊಂಡಿದ್ದಾರೆ. ಆರೋಗ್ಯಕ್ಕೆ ಹಾನಿಕಾರಕವಾದ ಜಾಹೀರಾತಿನಲ್ಲಿ ನಟಿಸಿದ್ದಕ್ಕೆ ಅಕ್ಷಯ್ ವಿರುದ್ಧ ಅಭಿಮಾನಿಗಳು ಗರಂ ಆಗಿದ್ದರು.
ಪ್ರಾಧ್ಯಾಪಕಿಗೆ ಅಶ್ಲೀಲ ಪತ್ರ; ಮೂವರು ಸಹಪ್ರಾಧ್ಯಾಪಕರು ಅರೆಸ್ಟ್

Related Articles

Back to top button