Latest

ಕೊರೊನಾ ಸೋಂಕಿಗೆ ತುತ್ತಾದ ಬಾಲಿವುಡ್ ನಟಿ ಆಲಿಯಾ ಭಟ್

ಪ್ರಗತಿವಾಹಿನಿ ಸುದ್ದಿ; ಮುಂಬೈ: ದೇಶಾದ್ಯಂತ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಇದೀಗ ಬಾಲಿವುಡ್ ಬೆಡಗಿ ಆಲಿಯಾ ಭಟ್ ಗೂ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ನೀಡಿರುವ ಆಲಿಯಾ ಭಟ್, ತಮಗೆ ಕೋವಿಡ್ ಪಾಸಿಟಿವ್ ಬಂದಿದ್ದು, ವೈದ್ಯರ ಸಲಹೆ ಮೇರೆಗೆ ಹೋಮ್ ಐಸೋಲೇಷನ್ ನಲ್ಲಿದ್ದೇನೆ. ಸೋಂಕಿನ ಬಗ್ಗೆ ಎಲ್ಲಾ ಸುರಕ್ಷತಾ ಕ್ರಮಗಳನ್ನು ಅನುಸರಿಸುವುದಾಗಿ ತಿಳಿಸಿದ್ದಾರೆ.

Home add -Advt

ಇತ್ತೀಚೆಗೆ ನನ್ನ ಸಂಪರ್ಕದಲ್ಲಿರುವ ಎಲ್ಲರೂ ತಕ್ಷಣ ಕೋವಿಡ್ ಪರೀಕ್ಷೆಗೆ ಒಳಗಾಗುವಂತೆ ಆಲಿಯಾ ಮನವಿ ಮಾಡಿದ್ದಾರೆ.

ಮುಂಬೈ ಮಹಾನಗರದಲ್ಲಿ ಕೊರೊನಾ ಎರಡನೇ ಅಲೆ ಆರಂಭವಾದಂತಿದ್ದು, ನಿನ್ನೆ ಒಂದೇ ದಿನ 8646 ಪ್ರಕರಣಗಳು ದಾಖಲಾಗಿದೆ. 18 ಜನರು ಕೋವಿಡ್ ಗೆ ಬಲಿಯಾಗಿದ್ದಾರೆ.

Related Articles

Back to top button