Latest

ಮತ್ತೆ ಆಸ್ಪತ್ರೆಗೆ ದಾಖಲಾದ ಬಾಲಿವುಡ್ ನಟ ದಿಲೀಪ್ ಕುಮಾರ್

ಪ್ರಗತಿವಾಹಿನಿ ಸುದ್ದಿ; ಮುಂಬೈ: ಬಾಲಿವುಡ್ ಹಿರಿಯ ನಟ ದಿಲೀಪ್ ಕುಮಾರ್ ಮತ್ತೆ ಅನಾರೋಗ್ಯಕ್ಕೀಡಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಉಸಿರಾಟದ ತೊಂದರೆಯಿಂದ ಬಳಲುತ್ತಿರುವ ದಿಲೀಪ್ ಕುಮಾರ್ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹತ್ತು ದಿನಗಳ ಹಿಂದಷ್ಟೇ ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿ ಡಿಸ್ಚಾರ್ಜ್ ಆಗಿದ್ದ ದಿಲೀಪ್ ಕುಮಾರ್ ಅವರಿಗೆ ಮತ್ತೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

98 ವರ್ಷದ ದಿಲೀಪ್ ಕುಮಾರ್ ಅವರಿಗೆ ವಯೋಸಹಜ ನಿಶ್ಯಕ್ತಿ ಕಾಣಿಸಿಕೊಂಡಿದ್ದು, ಚಿಕಿತ್ಸೆ ಬಳಿಕ ಇದೀಗ ಸ್ವಲ್ಪಮಟ್ಟಿಗೆ ಚೇತರಿಸಿಕೊಂಡಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಮೊಘಲ್ ಎ ಅಜಮ್, ದೇವದಾಸ್, ನಯಾ ದೌರ್, ರಾಮ್ ಔರ್ ಶ್ಯಾಮ್, ಕಿಲ್ವಾ ದಿಲೀಪ್ ಕುಮಾರ್ ಅವರಿಗೆ ಜನಪ್ರಿಯತೆಯನ್ನು ತೊಂದಕೊಟ್ಟ ಸಿನಿಮಾಗಳು
ಅಷ್ಟೊಂದು ಬಿಲ್ಡಪ್ ಕೊಡಲು ಅವರೇನು ಪ್ರಧಾನ ಮಂತ್ರಿನಾ?

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button