Latest

ಬಾಲಿವುಡ್ ಹಿರಿಯ ನಟ ದಿಲೀಪ್ ಕುಮಾರ್ ಇನ್ನಿಲ್ಲ

ಪ್ರಗತಿವಾಹಿನಿ ಸುದ್ದಿ; ಮುಂಬೈ: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಬಾಲಿವುಡ್ ಲೆಂಡರಿ ಆಕ್ಟರ್ ದಿಲೀಪ್ ಕುಮಾರ್ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಅವರಿಗೆ 98 ವರ್ಷ ವಯಸ್ಸಾಗಿತ್ತು.

ಜೂನ್ 30ರಿಂದ ಮುಂಬೈ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ದಿಲೀಪ್ ಕುಮಾರ್ ನಿಧನಕ್ಕೆ ಬಾಲಿವುಡ್ ಚಿತ್ರರಂಗವೇ ಕಂಬನಿ ಮಿಡಿದಿದೆ.

1944ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ದಿಲೀಪ್ ಕುಮಾರ್ 5 ದಶಕಗಳ ಕಾಲ ಸಕ್ರಿಯರಾಗಿದ್ದರು. ಕೊಹಿನೂರ್, ಮುಘಲ್-ಏ-ಆಜಮ್, ಶಕ್ತಿ, ನಯಾ ದೌರ್, ರಾಮ್ ಔರ್ ಶ್ಯಾಮ್ ಮುಂತಾದ ಸಿನಿಮಾ ದಿಲೀಪ್ ಅವರ ಜನಪ್ರಿಯ ಚಿತ್ರಗಳಾಗಿವೆ.

Related Articles

Back to top button