Latest

ಡೋಲಿಡಾ…ಸಾಂಗ್ ಬಿಡುಗಡೆ: ಕನಸು ನನಸಾಯ್ತು ಎಂದ ಆಲಿಯಾ

https://www.instagram.com/tv/CZyQRJlgyS7/?utm_source=ig_web_copy_link

 

Related Articles

ಪ್ರಗತಿವಾಹಿನಿ ಸುದ್ದಿ; ಮುಂಬೈ: ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಬಹುನಿರೀಕ್ಷಿತ ಚಿತ್ರ ಗಂಗೂಬಾಯಿ ಕಾಠಿಯಾವಾಡಿ ಚಿತ್ರದ ಡೋಲಿಡಾ…ಹಾಡು ಬಿಡುಗಡೆಯಾಗಿದ್ದು, ಈ ಕುರಿತು ನಟಿ ಆಲಿಯಾ ಭಟ್ ಇನ್ ಸ್ಟಾಗ್ರಾಮ್ ನಲ್ಲಿ ತಮ್ಮ ಕನಸು ನನಸಾದ ಬಗ್ಗೆ ಬರೆದುಕೊಂಡಿದ್ದಾರೆ.

ಯೂಟ್ಯೂಬ್ ನಲ್ಲಿ ವಿಡಿಯೋ ಸಾಂಗ್ ರಿಲೀಸ್ ಆಗಿದ್ದು, ಬಿಡಿಗಡೆಯಾದ ಕೆಲವೇ ಗಂಟೆಗಳಲ್ಲಿ ಲಕ್ಷಾಂತರ ಜನರು ವೀಕ್ಷಿಸಿದ್ದಾರೆ. ಅಲ್ಲದೇ ಆಲಿಯಾ ಅವರ ಡ್ಯಾನ್ಸ್ ಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Home add -Advt

ಇನ್ ಸ್ಟಾಗ್ರಾಮ್ ನಲ್ಲಿ ಹಾಡಿನ ಝಲಕ್ ನ್ನು ಪೋಸ್ಟ್ ಮಾಡಿರುವ ಆಲಿಯಾ, ಕೊನೆಗೂ ನಮ್ಮ ಕನಸು ನನಸಾಗಿದೆ. ನನ್ನ ಹೃದಯ ಯಾವಾಗಲೂ ಡೋಲಿಡಾ…ಗಾಗಿ ಮಿಡಿಯುತ್ತಿರುತ್ತದೆ ಎಂದು ಬರೆದುಕೊಂಡಿದ್ದಾರೆ.

ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದಲ್ಲಿ, ಆಲಿಯಾ ಭಟ್ ಅಭಿನಯದಲ್ಲಿ ಮೂಡಿಬಂದಿರುವ ಗಂಗೂಬಾಯಿ ಕಾಠಿಯಾವಾಡಿ ಸಿನಿಮಾ ಫೆ.25ರಂದು ಬಿಡುಗಡೆಗೆ ಸಿದ್ಧವಾಗಿದೆ.

WWE ಖ್ಯಾತಿಯ ಗ್ರೇಟ್ ಖಲಿ ಬಿಜೆಪಿಗೆ ಸೇರ್ಪಡೆ

Related Articles

Back to top button