Film & EntertainmentKannada NewsLatest

*ಬಾಲಿವುಡ್ ಖ್ಯಾತ ನಟಿ ಪೂನಂ ಪಾಂಡೆ ಇನ್ನಿಲ್ಲ*

ಪ್ರಗತಿವಾಹಿನಿ ಸುದ್ದಿ: ಬಾಲಿವುಡ್ ನ ಕಾಂಟ್ರವರ್ಸಿಯಲ್ ಕ್ವೀನ್ ಎಂದೇ ಕರೆಯಲ್ಪಡುತ್ತಿದ್ದ ನಟಿ, ಮಾಡೆಲ್ ಪೂನಂ ಪಾಂಡೆ ವಿಧಿವಶರಾಗಿದ್ದಾರೆ. ಅವರಿಗೆ ಕೇವಲ 32 ವರ್ಷ ವಯಸ್ಸಾಗಿತ್ತು.

ಗರ್ಭಕೋಶ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಪೂನಂ ಪಾಂಡೆ ಚಿಕಿತ್ಸೆಯನ್ನೂ ಪಡೆಯುತ್ತಿದ್ದರು. ಆದರೆ ಇಂದು ಬೆಳಿಗ್ಗೆ ಪುನಂ ಪಾಂಡೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಪೂನಂ ಪಾಂಡೆ ನಿಧನ ಚಿತ್ರರಂಗಕ್ಕೆ ಆಘಾತವನ್ನು ತಂದಿದೆ.

ಪೂನಂ ಪಾಂಡೆ ಅವರ ಮ್ಯಾನೇಜರ್ ಈ ಬಗ್ಗೆ ಮಾಹಿತಿ ನಿಡಿದ್ದು, ಪೂನಂ ಪಾಂಡೆ ಗರ್ಭಕಂಠ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಇಂದು ಅವರು ನಮ್ಮನ್ನು ಅಗಲಿರುವುದು ಆಘಾತ ತಂದಿದೆ ಎಂದು ತಿಳಿಸಿದ್ದಾರೆ.

ಬಾಲಿವುಡ್ ನಲ್ಲಿ ಸಾಕಷ್ಟು ವಿವಾದ ಹಾಗೂ ಬೋಲ್ಡ್ ಫೋಟೋಗಳ ಮೂಲಕವೇ ಸುದ್ದಿಯಾಗಿದ್ದ ಪೂನಂ ಪಾಂಡೆ ಕಳೆದ ಒಂದು ವರ್ಷಗಳಿಂದ ಸಾಮಾಜಿಕ ತಾಣಗಳಿಂದಲೂ ದೂರ ಉಳಿದಿದ್ದರು.

Home add -Advt


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button