ಪ್ರಗತಿವಾಹಿನಿ ಸುದ್ದಿ: ಖ್ಯಾತ ಬಾಲಿವುಡ್ ನಟ ಸೈಫ್ ಅಲಿ ಖಾನ್ ಗೆ ದುಷ್ಕರ್ಮಿಯೊಬ್ಬ ಅವರ ಮನೆಯಲ್ಲಿಯೇ ತಡರಾತ್ರಿ ಚಾಕು ಇರಿದು ಎಸ್ಕೇಪ್ ಆಗಿರುವ ಘಟನೆ ಮುಂಬೈನಲ್ಲಿ ನಡೆದಿದೆ.
ಸೈಫ್ ಅಲಿ ಖಾನ್ ಅವರ ದೇಹದ 6 ಕಡೆಗಳಲ್ಲಿ ಚಾಕು ಇರಿಯಲಾಗಿದ್ದು, ತಡರಾತ್ರಿ ಅವರ ಮನೆಗೆ ನುಗ್ಗಿದ ಕಳ್ಳ ಈ ಕೃತ್ಯವೆಸಗಿದ್ದಾನೆ ಎನ್ನಲಾಗಿದೆ. ಇಂದು ನಸುಕಿನ ಜಾವ 3:30ರ ಸುಮಾರಿಗೆ ಸೈಫ್ ಅಲಿ ಖಾನ್ ಅವರನ್ನು ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸೈಫ್ ಅಲಿಖಾನ್ ಅವರ ಸ್ಥಿತಿ ಗಂಭೀರವಾಗಿದ್ದು, ಆಪರೇಷನ್ ಬಳಿಕ ಹೆಚ್ಚಿನ ಮಾಹಿತಿ ನೀಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ