Latest

ಬಾಲಿವುಡ್ ನಟ ಸಲ್ಮಾನ್ ಖಾನ್, ರಾಕುಲ್ ಪ್ರೀತ್ ಸಿಂಗ್ ವಿರುದ್ಧ ದೂರು ದಾಖಲು

ಪ್ರಗತಿವಾಹಿನಿ ಸುದ್ದಿ; ಮುಂಬೈ: ಹೈದರಾಬಾದ್ ಹೊರವಲಯದಲ್ಲಿ ಪಶುವೈದ್ಯಾಧಿಕಾರಿ ಅತ್ಯಾಚಾರ ಹಾಗೂ ಸಜೀವ ದಹನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ನಿಜವಾದ ಹೆಸರನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಹಿರಂಗ ಪಡಿಸಿದ ಆರೋಪದ ಹಿನ್ನೆಲೆಯಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ ಹಾಗೂ ನಟಿ ರಾಕುಲ್ ಪ್ರೀತ್ ಸಿಂಗ್ ವಿರುದ್ಧ ಪ್ರಕರಣ ದಾಖಲಾಗಿದೆ.

ಅತ್ಯಾಚಾರ ಸಂತ್ರಸ್ತೆಯ ನಿಜವಾದ ಹೆಸರು ಹಾಗೂ ಆಕೆಯ ವಿಳಾಸ ಪುರಾವೆಗಳನ್ನು ಬಹಿರಂಗಪಡಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟ ಸಂದೇಶ ನೀಡಿದ್ದರೂ ಕೂಡ ಕೆಲವರು ತಮ್ಮ ಆಕ್ರೋಶ ವ್ಯಕ್ತಪಡಿಸುವ ಬರದಲ್ಲಿ ಹೆಸರು ಬಹಿರಂಗ ಪಡಿಸುವ ಪ್ರಮಾದವೆಸಗುತ್ತಿದ್ದಾರೆ. ಪಶುವೈದ್ಯಾಧಿಕಾರಿ ಪ್ರಕರಣದಲ್ಲೂ ಬಾಲಿವುಡ್ ಹಾಗೂ ಟಾಲಿವುಡ್ ನ ಹಲವು ನಟ-ನಟಿಯರು ಈ ತಪ್ಪು ಮಾಡಿದ್ದರು. ಹೆಸರು ಬಹಿರಂಗಪಡಿಸಿದವರನ್ನು ಬಂಧಿಸಬೇಕು ರೆಂದು ಆಗ್ರಹಿಸಿ ವಕೀಲ ಗೌರವ್ ಗುಲಾಟಿ ದೆಹಲಿಯ ತೀಸ್ ಹಜಾರಿ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅಲ್ಲದೇ ಸಬ್ಜಿ ಮಂಡಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್, ಅಜಯ್ ದೇವಗನ್, ಅಕ್ಷಯ್ ಕುಮಾರ್, ರಾಕುಲ್ ಪ್ರೀತ್ ಸಿಂಗ್, ಫರಾನ್ ಅಖ್ತರ್, ಅನುಪಮ್ ಖೇರ್ ಸೇರಿದಂತೆ ಹಲವರ ವಿರುದ್ಧ ಪ್ರಕರಣ ದಾಖಲಾಗಿದೆ.

ಡ್ರಗ್ಸ್ ಪ್ರಕರಣ; ಆಂಕರ್ ಅನುಶ್ರೀ ಕುರಿತು ಸ್ಫೋಟಕ ಮಾಹಿತಿ ಬಹಿರಂಗ

Home add -Advt

Related Articles

Back to top button