Latest

ವರದಕ್ಷಿಣೆ ಕಿರುಕುಳ; ಐಎಎಸ್ ಅಧಿಕಾರಿ ವಿರುದ್ಧ ಪ್ರಕರಣ ದಾಖಲು

ಪ್ರಗತಿವಾಹಿನಿ ಸುದ್ದಿ; ಭೋಪಾಲ್: ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪದ ಮೇಲೆ ಮಧ್ಯಪ್ರದೇಶ ಕೇಡರ್ ಐಎ ಎಸ್ ಅಧಿಕಾರಿ ಬುಂಡಾಸ್ ವಿರುದ್ಧ ಪ್ರಕರಣ ದಾಖಲಾಗಿದೆ.

ಐಎ ಎಸ್ ಅಧಿಕಾರಿ ಬುಂಡಾಸ್ ವಿರುದ್ಧ ಅವರ ಪತ್ನಿ ವರದಕ್ಷಿಣೆ ಕಿರುಕುಳ ದೂರು ದಾಖಲಿಸಿದ್ದಾಗಿ ಸಹಾಯಕ ಪೊಲೀಸ್ ಕಮೀಷ್ನರ್ ನಿಧಿ ಸಕ್ಸೇನಾ ತಿಳಿಸಿದ್ದಾರೆ. ಐಎ ಎಸ್ ಅಧಿಕಾರಿ ವಿರುದ್ಧ ಪ್ರಾಥಮಿಕ ತನಿಖೆ ನಡೆಸಿ ಎಫ್ ಐ ಆರ್ ದಾಖಲಿಸಲಾಗಿದೆ.

Home add -Advt

ಬುಂಡಾಸ್ 2011ರ ಕೇಡರ್ ಎಂಪಿ ಬ್ಯಾಚ್ ಅಧಿಕಾರಿಯಾಗಿದ್ದು ಪ್ರಸ್ತುತ ಅರಣ್ಯ ಇಲಾಖೆಯಲ್ಲಿ ಉಪ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಈ ಮೊದಲು ಛತ್ತರ್ಪುರ ಜಿಲ್ಲೆ ಸೇರಿದಂತೆ ಹಲವೆಡೆ ಕಲೆಕ್ಟರ್ ಆಗಿ ಕಾರ್ಯನಿರ್ವಹಿಸಿದ್ದು, ಅಲ್ಲಿಯೂ ಹಲವು ವಿವಾದಗಳಿಗೆ ಗುರಿಯಾಗಿದ್ದರು.
ಬೆಳಗಾವಿ, ನಿಪ್ಪಾಣಿ, ಕಾರವಾರ, ಬೀದರ್ ಮಹಾರಾಷ್ಟ್ರಕ್ಕೆ ಸೇರಬೇಕು; ಮತ್ತೆ ಕಿಡಿಹೊತ್ತಿಸಿದ ಮಹಾ ಡಿಸಿಎಂ

Related Articles

Back to top button