Latest

ಮಹಾರಾಷ್ಟ್ರದಲ್ಲಿ ಸಿಲುಕಿದ್ದ ಕನ್ನಡಿಗ ವಲಸೆ ಕಾರ್ಮಿಕರಿಗೆ ಬಸ್ ವ್ಯವಸ್ಥೆ ಕಲ್ಪಿಸಿದ ಬಾಲಿವುಡ್ ನಟ

ಪ್ರಗತಿವಾಹಿನಿ ಸುದ್ದಿ; ಮುಂಬೈ: ಲಾಕ್‍ಡೌನ್‍ನಿಂದಾಗಿ ಮಹಾರಾಷ್ಟ್ರದಲ್ಲಿ ಸಿಲುಕಿದ್ದ ಕರ್ನಾಟಕದ ನೂರಾರು ವಲಸೆ ಕಾರ್ಮಿಕರಿಗೆ ಬಾಲಿವುಡ್ ನಟ ಸೋನು ಸೂದ್ ಬಸ್ ವ್ಯವಸ್ಥೆ ಕಲ್ಪಿಸಿ ರಾಜ್ಯಕ್ಕೆ ಕಳುಹಿಸಿಕೊಟ್ಟಿದ್ದಾರೆ.

ಕರ್ನಾಟಕ ಮತ್ತು ಮಹಾರಾಷ್ಟ್ರ ಸರ್ಕಾರಗಳ ಜೊತೆಗೆ ಚರ್ಚಿಸಿದ ಸೋನು ಸೂದ್, ಕಲಬುರಗಿಯಿಂದ ಮಹಾರಾಷ್ಟ್ರದ ಥಾಣೆಗೆ ಬಂದಿದ್ದ ವಲಸೆ ಕಾರ್ಮಿಕರನ್ನು ಅವರ ಊರುಗಳಿಗೆ ಕಳುಹಿಸಲು ಅನುಮತಿ ಪಡೆದಿದ್ದರು. ಈ ಮೂಲಕ ತಮ್ಮ ಸ್ವಂತ ಖರ್ಚಿನಲ್ಲಿ ಒಟ್ಟು ಹತ್ತು ಬಸ್‍ಗಳ ವ್ಯವಸ್ಥೆ ಮಾಡಿ ಥಾಣೆಯಿಂದ ಕಲಬುರಗಿಗೆ ಕಳುಹಿಸಿಕೊಟ್ಟಿದ್ದಾರೆ. ಅಲ್ಲದೆ ವಲಸೆ ಕಾರ್ಮಿಕರಿಗೆ ಊಟದ ಕಿಟ್‍ಗಳನ್ನು ನೀಡಿ ಮಾನವೀಯತೆ ಮೆರೆದಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಸೋನು ಸೂದ್, ಈ ಸಂದರ್ಭದಲ್ಲಿ ಎಲ್ಲರೂ ತಮ್ಮ ಕುಟುಂಬ, ಆತ್ಮೀಯರೊಂದಿಗೆ ಇರಲು ಇಷ್ಟಪಡುತ್ತಾರೆ. ಆದ್ದರಿಂದ ವಲಸಿಗರು ಮನೆಗೆ ತಲುಪಲು ಸಹಾಯ ಮಾಡಲು ಮಹಾರಾಷ್ಟ್ರ-ಕರ್ನಾಟಕ ರಾಜ್ಯ ಸರ್ಕಾರಗಳಿಂದ ಅನುಮತಿ ಕೋರಿದ್ದೆ. ಅದರಂತೆ ವಲಸೆ ಕಾರ್ಮಿಕರನ್ನು ಕಳಿಸಿಕೊಟ್ಟಿದ್ದೇನೆ. ಮಹಾರಾಷ್ಟ್ರದ ಸರ್ಕಾರಿ ಅಧಿಕಾರಿಗಳು ವಲಸೆ ಕಾರ್ಮಿಕರನ್ನು ಕಳುಹಿಸಿಕೊಡಲು ಅಗತ್ಯ ದಾಖಲೆಗಳನ್ನು ಒದಗಿಸಿದರು. ವಲಸೆ ಕಾರ್ಮಿಕರು ಪುಟ್ಟ ಮಕ್ಕಳು, ವೃದ್ಧ ಪೋಷಕರನ್ನು ಕರೆದುಕೊಂಡು ರಸ್ತೆ ಮಾರ್ಗವಾಗಿ ಹೋಗುವುದನ್ನು ಕಂಡು ನನಗೆ ನೋವಾಗಿತ್ತು. ಹೀಗಾಗಿ ಅವರ ಸಹಾಯಕ್ಕೆ ನಿಂತೆ ಎಂದು ಹೇಳಿದ್ದಾರೆ.

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button