Latest
ನಟ ಸುಶಾಂತ್ ಸಿಂಗ್ ಆಪ್ತ ಸಹಾಯಕನನ್ನು ವಶಕ್ಕೆ ಪಡೆದ ಎನ್ ಸಿಬಿ

ಪ್ರಗತಿವಾಹಿನಿ ಸುದ್ದಿ; ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣ ಸಂಬಂಧ ನಟನ ಆಪ್ತ ಸಹಾಯಕ ಸ್ಯಾಮ್ಯುಯೆಲ್ ಮಿರಾಂಡಾ ಅವರನ್ನು ಎನ್ ಸಿಬಿ ವಶಕ್ಕೆ ಪಡೆದುಕೊಂಡಿದೆ.
ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಹಿಂದೆ ಮಾದಕ ವಸ್ತುವಿನ ನಂಟು ಇರುವ ಆರೋಪ ಕೇಳಿಬಂದಿರುವ ಹಿನ್ನಲೆಯಲ್ಲಿ ಎನ್ ಸಿಬಿ (ಮಾದಕ ವಸ್ತು ನಿಯಂತ್ರಣ ಸಂಸ್ಥೆ) ಅಧಿಕಾರಿಗಳು ಈಗಾಗಲೇ ಸುಶಾಂತ್ ಗೆಳತಿ ರಿಯಾ ಚಕ್ರವರ್ತಿ ಅವರ ಸಹೋದರ ಶೋವಿಕ್ ಚಕ್ರವರ್ತಿಯ ನಿವಾಸದಲ್ಲೂ ಶೋಧ ಕಾರ್ಯ ನಡೆಸಿದ್ದರು.
ಇದರ ಬೆನ್ನಲ್ಲೇ ಇದೀಗ ಸುಶಾಮ್ತ್ ಸಿಂಗ್ ಅವರ ಆಪ್ತ ಸಾಹಯಕ ಸ್ಯಾಮ್ಯುಯೆಲ್ ಅವರನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ಅವರ ಮುಂಬೈನ ಮನೆಯಲ್ಲೂ ಶೋಧ ಕಾರ್ಯ ಮುಂದುವರೆದಿದೆ.




