Latest

ಬಾಲಿವುಡ್ ಖ್ಯಾತ ನಟ ಆತ್ಮಹತ್ಯೆಗೆ ಶರಣು

ಪ್ರಗತಿವಾಹಿನಿ ಸುದ್ದಿ; ಮುಂಬೈ: ಬಾಲಿವುಡ್ ನ ಖ್ಯಾತ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮುಂಬೈನ ಬಾಂಧ್ರಾ ನಿವಾಸದಲ್ಲಿ ನಡೆದಿದೆ. ಕೇವಲ 35 ವರ್ಷದ ಬಾಲಿವುಡ್ ನ ಭರವಸೆ ನಟ ಸಾವಿಗೆ ಶರಣಾಗಿರುವುದು ಹಿಂದಿ ಚಿತ್ರರಂಗ ದಿಗ್ಭ್ರಮೆಗೊಳಗಾಗಿದೆ.

ಬಾಂದ್ರಾದ ತಮ್ಮ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಸುಶಾಂತ್ ಸಿಂಗ್ ಪತ್ತೆಯಾಗಿದ್ದಾರೆ. ಇದನ್ನು ಕಂಡ ಮನೆ ಕೆಲಸದಾತ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾನೆ.

Related Articles

ಪವಿತ್ರ ರಿಷ್ತಾ ಧಾರಾವಾಹಿಯ ಮೂಲಕ ಮನೆಮಾತಾಗಿದ್ದ ಸುಶಾಂತ್ ಬಳಿಕ 2008ರಲ್ಲಿ ಬಾಲಿವುಡ್ ಗೆ ಎಂಟ್ರಿಕೊಟ್ಟಿದ್ದರು. 11 ಸಿನಿಮಾಗಳಲ್ಲಿ ನಟಿಸಿದ್ದ ಅವರು2013ರಲ್ಲಿ ಫಿಲ್ಮ್ ಫೇರ್ ಪ್ರಶಸ್ತಿಗೆ ಭಾಜನರಾಗಿದ್ದರು. ಎಂ ಎಸ್ ಧೋನಿ ಜೀವನಾಧಾರಿತ ಚಿತ್ರದಲ್ಲಿ ಧೋನಿ ಪಾತ್ರ ಮಾಡಿ ಜನ ಮೆಚ್ಚುಗೆ ಗಳಿಸಿದ್ದರು.

Home add -Advt

Related Articles

Back to top button