
ಪ್ರಗತಿವಾಹಿನಿ ಸುದ್ದಿ: ಕ್ರಿಕೆಟ್ ಸ್ಟೇಡಿಯಂನಲ್ಲಿ ಪಂದ್ಯ ನಡೆಯುವಾಗಲೆ ಉಗ್ರರು ಬಾಂಬ್ ಸ್ಪೋಟಿಸಿದ್ದು, ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಸ್ಟೇಡಿಯಂವೊಂದರಲ್ಲಿ ಕ್ರಿಕೆಟ್ ಪಂದ್ಯದ ವೇಳೆ ಶಂಕಿತ ಭಯೋತ್ಪಾದನಾ ದಾಳಿಯಲ್ಲಿ ಓರ್ವ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಈ ಸ್ಪೋಟವು ಪಾಕಿಸ್ತಾನದ ಖಾರ್ ತಹಸಿಲ್‌ನ ಕೌಸರ್ ಕ್ರೀಡಾಂಗಣದಲ್ಲಿ ಸಂಭವಿಸಿದೆ ಎಂದು ವರದಿಯಾಗಿದೆ.
ಇತ್ತೀಚಿಗೆ ಸಂಭವಿಸಿದ ಸರಣಿ ಘಟನೆಗಳಲ್ಲಿ ಖೈಬರ್ ಪಖ್ತುಂಖ್ವಾ ಪೊಲೀಸ್ ಠಾಣೆಯ ಮೇಲೆ ಕಳೆದ ವಾರ ಕ್ವಾಡ್‌ಕಾಪ್ಟರ್ ಮೂಲಕ ದಾಳಿ ನಡೆಸಲಾಗಿತ್ತು. ಪರಿಣಾಮವಾಗಿ ಪೊಲೀಸ್ ಪೇದೆ ಮತ್ತು ನಾಗರಿಕರೊಬ್ಬರು ಗಾಯಗೊಂಡಿದ್ದಾರೆ
ಸದ್ಯ ದಾಳಿಯ ಹೊಣೆಯನ್ನು ಯಾವುದೇ ಸಂಘಟನೆ ಹೊತ್ತುಕೊಂಡಿಲ್ಲ. ಕೆಲವು ವಾರಗಳ ಹಿಂದೆ ಭದ್ರತಾ ಪಡೆಗಳು ಪ್ರಾರಂಭಿಸಿದ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಗೆ ಪ್ರತಿಕ್ರಿಯೆಯಾಗಿ ಭಯೋತ್ಪಾದಕರು ಈ ದಾಳಿ ನಡೆಸಿರಬಹುದು ಎಂದು ಭದ್ರತಾ ಅಧಿಕಾರಿಗಳು ಶಂಕಿಸಿದ್ದಾರೆ.