Election NewsKannada NewsKarnataka NewsNational

ಮತ ಎಣಿಕೆ ಕಾರ್ಯ ಆರಂಭವಾಗುವ ಮುನ್ನ ಬಾಂಬ್ ಸ್ಫೋಟ

ಪ್ರಗತಿವಾಹಿನಿ ಸುದ್ದಿ: ಪಶ್ಚಿಮ ಬಂಗಾಳ ರಾಜ್ಯ ಲೋಕಸಭೆ ಚುನಾವಣೆ ಮತದಾನದ ಸಂದರ್ಭದಲ್ಲಿಯೂ ಬಾಂಬ್ ಸ್ಪೋಟ್ ಆಗುವ ಮೂಲಕ ಹಿಂಸಾಚಾರಕ್ಕೆ ಸಾಕ್ಷಿಯಾಗಿತ್ತು. ಆದರೆ ಇದೀಗ ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಆರಂಭವಾಗುವ ಮುನ್ನವೇ ಕಚ್ಚಾ ಬಾಂಬ್ ಸ್ಫೋಟಗೊಂಡು ಐವರು ಗಾಯಗೊಂಡಿದ್ದಾರೆ.

ದಕ್ಷಿಣ 24 ಪರಗಣಗಳ ಭಂಗಾರ್‌ನ ಚಲ್ತಾಬೇರಿಯಾದಲ್ಲಿ ಕಚ್ಚಾ ಬಾಂಬ್ ಸ್ಫೋಟ ಸಂಭವಿಸಿದೆ. ಐವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವರು ಬಾಂಬ್ ತಯಾರಿಸುತ್ತಿದ್ದಾಗ ಈ ಸ್ಫೋಟ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ.

Related Articles

ಗಾಯಗೊಂಡ ಒಬ್ಬ ವ್ಯಕ್ತಿ ಇಂಡಿಯನ್ ಸೆಕ್ಯುಲರ್ ಫ್ರಂಟ್ ನ ಪಂಚಾಯತ್ ಸದಸ್ಯ ಎಂದು ವರದಿಯಾಗಿದೆ. ಸುದ್ದಿ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Home add -Advt

Related Articles

Back to top button