ಪ್ರಗತಿವಾಹಿನಿ ಸುದ್ದಿ; ಲಖನೌ: ಉತ್ತರ ಪ್ರದೇಶ ರಾಜಧಾನಿ ಲಖನೌನ ನ್ಯಾಯಾಲಯದಲ್ಲಿ ಕಚ್ಚಾ ಬಾಂಬ್ ಸ್ಫೋಟವಾಗಿದೆ. ಘಟನೆಯಲ್ಲಿ ಇಬ್ಬರು ವಕೀಲರು ಸೇರಿ ಮೂವರಿಗೆ ಗಾಯಗಳಾಗಿವೆ.
ನ್ಯಾಯಾಲಯದ ಕಾಂಪೌಂಡ್ ಬಳಿ ಗುರುವಾರ ಮಧ್ಯಾಹ್ನ ಬಾಂಬ್ ಸ್ಫೋಟಗೊಂಡಿದ್ದು, ಸ್ಥಳದಲ್ಲಿ ಮೂರು ಕಚ್ಚಾ ಬಾಂಬ್‌ಗಳು ಪತ್ತೆಯಾಗಿದೆ ಎಂದೂ ತಿಳಿದುಬಂದಿದೆ. ಬಾಂಬ್ ಅನ್ನು ಲಖನೌ ನ್ಯಾಯಾಲಯದ ವಕೀಲರ ಚೇಂಬರ್‌ನತ್ತ ಎಸೆಯಲಾಗಿದ್ದು, ಈ ವೇಳೆ ವಕೀಲರು ಗಾಯಕ್ಕೊಳಗಾಗಿದ್ದಾರೆ ಎಂದು ತಿಳಿದುಬಂದಿದೆ.
ಲಖನೌ ವಕೀಲರ ಸಂಘದ ಜಂಟಿ ಕಾರ್ಯದರ್ಶಿ ಸಂಜೀವ್ ಲೋಧಿಯನ್ನು ಗುರಿಯಾಗಿಸಿಕೊಂಡು ಬಾಂಬ್ ಸ್ಫೋಟಿಸಲಾಗಿದೆ ಎನ್ನಲಾಗಿದ್ದು, ಘಟನೆಯಲ್ಲಿ ಕೂದಲೆಳೆ ಅಂತರದಲ್ಲಿ ಲೋದಿ ಪಾರಾಗಿದ್ದಾರೆ.
ಬಾಂಬ್ ಸ್ಪೋಟಿಸಿದ ವ್ಯಕ್ತಿಯನ್ನು ಜೀತು ಯಾದವ್ ಎಂದು ಗುರುತಿಸಲಾಗಿದ್ದು, ಈತ ಕಚ್ಛಾ ಸಾಮಾಗ್ರಿ ಬಳಸಿ ಈ ಸ್ಪೋಟ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳಕ್ಕೆ ಉತ್ತರ ಪ್ರದೇಶ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ