Latest

*ಬಾಂಬ್ ಬೆದರಿಕೆ ಕರೆ: ಶಾಲೆಗಳಿಗೆ ರಜೆ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಇತ್ತಿಚೀಗೆ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆಗಳು ಹೆಚ್ಚಾಗಿದ್ದು, ಮತ್ತೆ ಉತ್ತರ ಪ್ರದೇಶದ ನೋಯ್ದಾ ಹಾಗೂ ದೆಹಲಿಯ ಎರಡು ಶಾಲೆಗಳಿಗೆ ಬೆಳ್ಳಂಬೆಳಗ್ಗೆ ಬಾಂಬ್ ಬೆದರಿಕೆ ಬಂದಿದೆ. ವಿಧ್ಯಾರ್ಥಿಗಳನ್ನು ವಾಪಸ್ ಮನೆಗೆ ಕಳುಹಿಸಿದ ಘಟನೆ ನಡೆದಿದೆ.

ನೋಯ್ಡಾದ ಶಿವ ನಾಡರ್ ಶಾಲೆಗೆ ಹಾಗೂ ಪೂರ್ವ ದೆಹಲಿಯ ಅಲ್ಕಾನ್ ಶಾಲೆಗೆ ಬಾಂಬ್ ಬೆದರಿಕೆ ಕರೆ ಬಂದಿದೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದು ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನ ದಳಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಶಾಲಾ ಆಡಳಿತ ಮಂಡಳಿ ಶಾಲೆಗಳಿಗೆ ರಜೆ ಘೋಷಣೆ ಮಾಡಿದ್ದು, ಮಕ್ಕಳನ್ನು ವಾಪಸ್ ಕರೆದುಕೊಂಡು ಹೋಗುವಂತೆ ಸೂಚನೆ ನೀಡಿದ್ದಾರೆ ಅದರಂತೆ ಮಕ್ಕಳ ಪೋಷಕರು ಶಾಲೆಗೆ ಬಂದು ಮಕ್ಕಳನ್ನು ಮನೆಗೆ ಕರೆದೊಯ್ದಿದ್ದಾರೆ.

ವರದಿಯ ಪ್ರಕಾರ ನೋಯ್ಡಾ ಶಿವ ನಾಡರ್ ಶಾಲೆಗೆ ಸ್ಪಾಮ್ ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ದೆಹಲಿಯ ಶಾಲೆಗೂ ಕೂಡ ಇ ಮೇಲ್ ಮೂಲಕ ಬೆದರಿಕೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಶಾಲೆಯ ಬಳಿ ತೀವ್ರ ಶೋಧ ಕಾರ್ಯ ನಡೆಯುತ್ತಿದ್ದು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button