Kannada NewsKarnataka NewsNational
*ಹುಬ್ಬಳ್ಳಿ ವಿಮಾನ ನಿಲ್ದಾಣದ ನಿರ್ದೇಶಕರಿಗೆ ಬಾಂಬ್ ಬೆದರಿಕೆ ಕರೆ*

ಪ್ರಗತಿವಾಹಿನಿ ಸುದ್ದಿ: ಹುಬ್ಬಳ್ಳಿ ವಿಮಾನ ನಿಲ್ದಾಣದ ನಿರ್ದೇಶಕರಿಗೆ ವ್ಯಕ್ತಿಯೊಬ್ಬ ಮೇಲ್ ಮೂಲಕ ಜೀವ ಬೆದರಿಕೆ ಸಂದೇಶ ಕಳುಹಿಸಿದ ಕುರಿತು ಗೋಕುಲ್ ರಸ್ತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿರ್ದೇಶಕ ರೂಪೇಶಕುಮಾರ ಅವರ ಕಚೇರಿ ಮೇಲ್ ಐಡಿಗೆ ಜೂನ್ 25ರಂದು ಸಂಜೆ 6.30ರ ವೇಳೆ ಲಾಂಗ್ ಲಿವ್ ಪ್ಯಾಲೆಸ್ಟೈನ್ ಎಂಬ ಹೆಸರಿನಲ್ಲಿ ಬೆದರಿಕೆ ಸಂದೇಶ ಬಂದಿದೆ. ಈ ಸಂದೇಶದಲ್ಲಿ ನೀವು ಮಾಡಿದ ಎಲ್ಲ ಕೆಟ್ಟ ಕೆಲಸಗಳಿಗೆ ಉತ್ತರವಿಲ್ಲ ಎಂದು ಭಾವಿಸಿದ್ದೀರಾ..? ನಾವು ನಿಮ್ಮನ್ನು ನಾಶ ಮಾಡುತ್ತೇವೆ. ಬೆಂಕಿಯಲ್ಲಿ ಎಸೆಯುತ್ತೇವೆ. ಉಸಿರುಗಟ್ಟಿ ಸಾಯುತ್ತೀರ ಎಂದು ಬೆದರಿಕೆ ಸಂದೇಶ ಕಳುಹಿಸಲಾಗಿದೆ.



