ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆಯಾದ ಬೆನ್ನಲ್ಲೇ ಇದೀಗ ಇಂಡಿಗೋ ವಿಮಾನದಲ್ಲಿ ಬಾಂಬ್ ಇಡಲಾಗಿದೆ ಎಂಬ ಬೆದರಿಕೆ ಕರೆ ಬಂದಿದ್ದು, ತೀವ್ರ ತಪಾಸಣೆಗೆ ಒಳಪಡಿಸಲಾಗಿದೆ.
ಮಂಗಳೂರಿನಿಂದ ಹೈದರಾಬಾದ್ ಗೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ಬಾಂಬ್ ಇರಿಸಲಾಗಿದ್ದು, ಅದನ್ನು ಸ್ಫೋಟಿಸುವುದಾಗಿ ಅನಾಮದೆಯ ವ್ಯಕ್ತಿಯೊಬ್ಬ ವಿಮಾನಯಾನ ಸಂಸ್ಥೆಗೆ ಕರೆಮಾಡಿ ಬೆದರಿಕೆ ಹಾಕಿದ್ದಾನೆ. ಬಾಂಬ್ ಬೆದರಿಕೆ ಬೆನ್ನಲ್ಲೇ ವಿಮಾನವನ್ನು ಏರ್ ಪೋರ್ಟ್ ಗೆ ವಾಪಸ್ ಕರೆಸಿ, 126 ಪ್ರಯಾಣಿಕರನ್ನು ವಿಮಾನದಿಂದ ಇಳಿಸಿ, ಪರಿಶೀಲನೆ ನಡೆಸಲಾಗಿದೆ. ಯಾವುದೇ ಬಾಂಬ್ ಗಳು ಪತ್ತೆಯಾಗಿಲ್ಲ ಎನ್ನಲಾಗಿದೆ.
ಇಂದು ಬೆಳಿಗ್ಗೆಯಷ್ಟೇ ಮಂಗಳೂರು ಏರ್ಪೋರ್ಟ್ನಲ್ಲಿ ಬ್ಯಾಗ್ ಒಂದರಲ್ಲಿ ಸಜೀವ್ ಬಾಂಬ್ ಪತ್ತೆಯಾಗಿದ್ದು, ಬಾಂಬ್ ನಿಷ್ಕ್ರೀಯ ದಳ ಹಾಗೂ ಪೊಲೀಸರು ಬಾಂಬ್ ನ್ನು ಕೆಂಜಾರು ಮೈದಾನಕ್ಕೆ ತಂದು ಅಲ್ಲಿ ನಿಷ್ಕ್ರಿಯಗೊಳಿಸುವ ಕಾರ್ಯಾದಲ್ಲಿ ತೊಡಗಿದ್ದಾರೆ. ಇದರ ಬೆನ್ನಲ್ಲೇ ವಿಮಾನದಲ್ಲಿ ಬಾಂಬ್ ಇರಿಸಲಾಗಿರುವ ಬಗ್ಗೆ ಬೆದರಿಕೆ ಕರೆ ಬಂದಿರುವುದು ಆತಂಕಕ್ಕೆ ಕಾರಣವಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ