Kannada NewsKarnataka NewsNationalPolitics

*ಪ್ರಧಾನಿ ಮೋದಿ ಪ್ರಯಾಣಿಸುವ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ: ವ್ಯಕ್ತಿ ಬಂಧನ*

ಪ್ರಗತಿವಾಹಿನಿ ಸುದ್ದಿ: ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶ ಭೇಟಿಗೂ ಮೊದಲು ಅವರು ಪ್ರಯಾಣಿಸುವ ವಿಮಾನಕ್ಕೆ ಬೆದರಿಕೆ ಕರೆ ಮಾಡಿದ್ದ ವ್ಯಕ್ತಿಯನ್ನು ಮುಂಬೈ ಖಾಕಿ ಪಡೆ ಇದೀಗ ಬಲೆಗೆ ಬೀಳಿಸಿದೆ.

ಫೆಬ್ರವರಿ 11 ರಂದು ಈ ಘಟನೆ ನಡೆದಿತ್ತು, ಪ್ರಧಾನಿ ಮೋದಿ ಅವರು ವಿದೇಶಕ್ಕೆ ತೆರಳುವಾಗ ಅವರ ವಿಮಾನದ ಮೇಲೆ ದಾಳಿ ನಡೆಯಬಹುದು ಎಂದು ಬೆದರಿಕೆ ಕರೆ ಬಂದಿತ್ತು. ಮುಂಬೈ ಪೊಲೀಸ್ ನಿಯಂತ್ರಣ ಕೊಠಡಿಗೆ ಈ ರೀತಿ ಕರೆ ಬಂದಿತ್ತು. ಮುಂಬೈ ಪೊಲೀಸ್ ನಿಯಂತ್ರಣ ಕೊಠಡಿಗೆ ಬೆದರಿಕೆ ಕರೆ ಮಾಡಿದ್ದ ವ್ಯಕ್ತಿಯನ್ನ ಚೆಂಬೂರ್ ಪ್ರದೇಶದಲ್ಲಿ ಬಂಧಿಸಲಾಗಿತ್ತು. ಈ ನಡುವೆ ಬಂಧಿತನನ್ನು ಮಾನಸಿಕ ಅಸ್ವಸ್ಥ ಎನ್ನಲಾಗಿದ್ದು, ವಿಚಾರಣೆ ನಡೆಯುತ್ತಿದೆ. ಹೀಗೆ ಬೆದರಿಕೆ ಕರೆ ಬಂದ ನಂತರ ಆತಂಕದ ವಾತಾವರಣ ನಿರ್ಮಾಣ ಆಗಿತ್ತು.

Home add -Advt

Related Articles

Back to top button