*ಹಿಂಡಲಗಾ ಜೈಲು ಸ್ಫೋಟಿಸುವುದಾಗಿ ಬಾಂಬ್ ಬೆದರಿಕೆ ಪ್ರಕರಣ; ಆರೋಪಿ ಸುಳಿವು ಪತ್ತೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಳಗಾವಿ ಹಿಂಡಲಗಾ ಜೈಲು ಹಾಗೂ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸ್ಫೋಟಿಸುವುದಾಗಿ ಬಂಡಿಖಾನೆ ಡಿಐಜಿಪಿಗೆ ಬೆದರಿಕೆ ಕರೆ ಮಾಡಿದ್ದ ಆರೋಪಿಯ ಸುಳಿವು ಪತ್ತೆ ಹಚ್ಚಲಾಗಿದೆ.
ಬೆಳಗಾವಿ ಹಿಂಡಲಗಾ ಜೈಲು ಹಾಗೂ ಬೆಂಗಳೂರು ಕೇಂದ್ರ ಕಾರಾಗೃಹ ಸ್ಫೋಟಿಸುವುದಾಗಿ ಬಂದಿಖಾನೆ ಇಲಾಖೆ ಉತ್ತರ ವಲಯ ಡಿಐಜಿಪಿ ಟಿ.ಪಿ.ಶೇಷ ಅವರಿಗೆ ಕರೆ ಮಾಡಿದ್ದ ಅನಾಮಧೇಯ ವ್ಯಕ್ತಿ ಜೀವ ಬೆದರಿಕೆಯನ್ನೂ ಹಾಕಿದ್ದ ಈ ಹಿನ್ನೆಲೆಯಲ್ಲಿ ಡಿಐಜಿಪಿ ಶೇಷ ಅವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಪ್ರಕರಣ ಸಂಬಂಧ ಆರೋಪಿ ಯಾರೆಂಬುದನ್ನು ಪತ್ತೆ ಮಾಡಲಾಗಿದೆ. ಆರೋಪಿ ಕಿರಣ್ ಮೋಷಿ (48) ಎಂದು ತಿಳಿದುಬಂದಿದೆ. ಈತ ಬೆಳಗಾವಿ ಜಿಲ್ಲೆಯ ಹುಕ್ಕೇರಿ ನಿವಾಸಿಯಾಗಿದ್ದಾನೆ. ಸಧ್ಯ ಬೆಂಗಳೂರಿನಲ್ಲಿ ತಲೆಮರೆಸಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.
ಆರೋಪಿ ಕಿರಣ್ ಮೋಷಿ 2022ರಲ್ಲಿ ಬೇರೆಯವರ ಅಕೌಂಟ್ ಹ್ಯಾಕ್ ಮಾಡಿ ಅಶ್ಲೀಲ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಟ್ಟಿದ್ದ. ಸೈಬರ್ ಕ್ರೈಂ ಪೊಲೀಸರು ಈತನನ್ನು ಬಂಧಿಸಿ ಬೆಳಗಾವಿ ಹಿಂಡಲಗಾ ಜೈಲಿಗೆ ಕಳುಹಿಸಿದ್ದರು. ಬಿಡುಗಡೆಯಾದ ಬಳಿಕ ಈಗ ಜಸ್ಟ್ ಡಯಲ್ ಮೂಲಕ ಸರ್ಕಾರಿ ಅಧಿಕಾರಿಗಳ ನಂಬರ್ ಪಡೆದು ಪತ್ನಿಯ ಹೆಸರಲ್ಲಿನ ಸಿಮ್ ನಿಂದ ಕರೆ ಮಾಡಿ ಬೆದರಿಕೆ ಹಾಕುತ್ತಿದ್ದಾನೆ. ಆರೋಪಿ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ