Kannada NewsKarnataka NewsNational

*ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ: ಹೈ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಕೇರಳದ ತಿರುವನಂತಪುರ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆಯ ಕರೆ ಬಂದಿರುವ ಕಾರಣ ಏರ್ ಇಂಡಿಯಾದ ಫ್ಲೈ 657 ಅನ್ನು ತುರ್ತು ಭೂಸ್ಪರ್ಷ ಮಾಡಲಾಗಿದೆ. 

ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ಇಡೀ ವಿಮಾನ ನಿಲ್ದಾಣದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದ್ದು, ಪೊಲೀಸರು, ಬಾಂಬ್ ಪತ್ತೆದಳ ಹಾಗೂ ಶ್ವಾನದಳ ಸಿಬ್ಬಂದಿಗಳು ಆಗಮಿಸಿ ಇಡೀ ಏರ್‌ಪೋರ್ಟ್ ನ ಶೋಧನೆಯಲ್ಲಿ ತೊಡಗಿದ್ದಾರೆ.

ಇಡೀ ವಿಮಾನವನ್ನು ಬೇರೆ ವಿಮಾನಗಳಿಗಿಂತ ಪ್ರತ್ಯೇಕವಾದ ಸ್ಥಳದಲ್ಲಿ ಬೇರ್ಪಡಿಸಿ ಇರಿಸಿ ತಪಾಸಣೆ ನಡೆಸಲಾಗುತ್ತಿದೆ. ವಿಮಾನ ನಿಲ್ದಾಣದಿಂದ ಪ್ರಯಾಣಿಕರನ್ನು ಕೂಡಲೇ ತೆರವು ಮಾಡುವುದಾಗಿ ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.

Home add -Advt

Related Articles

Back to top button