*ಬೆಳಗಾವಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಗರದ ಜಿಲ್ಲಾ ನ್ಯಾಯಾಲಯಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಗುರುವಾರ (ನ.26) ನ್ಯಾಯಾಲಯದ ಆವರಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನ ದಳದ ಸಿಬ್ಬಂದಿ ಸುದೀರ್ಘ ಪರಿಶೀಲನೆ ನಡೆಸಿದ್ದು, ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗದ ಹಿನ್ನೆಲೆಯಲ್ಲಿ ಬೆದರಿಕೆ ಹುಸಿ ಎಂಬುದು ದೃಢಪಟ್ಟಿದೆ. ನ್ಯಾಯಾಲಯದ ಕಟ್ಟಡವನ್ನು ಸ್ಫೋಟಿಸುವುದಾಗಿ ಅನಾಮಧೇಯ ಇ-ಮೇಲ್ ಮೂಲಕ ಬೆದರಿಕೆ ಸಂದೇಶ ರವಾನಿಸಲಾಗಿತ್ತು. ಈ ಸಂದೇಶ ಗಮನಕ್ಕೆ ಬರುತ್ತಿದ್ದಂತೆಯೇ … Continue reading *ಬೆಳಗಾವಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ*