
ಪ್ರಗತಿವಾಹಿನಿ ಸುದ್ದಿ: ಅಮೇರಿಕಾದಿಂದ ದೆಹಲಿಗೆ ಬರಬೇಕಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಮಾಡಲಾಗಿದ್ದು, ಅಮೆರಿಕನ್ ಏರ್ ಲೈನ್ಸ್ ವಿಮಾನ ಫೈಟ್ ರೋಮ್ ನಲ್ಲಿ ಲ್ಯಾಂಡ್ ಮಾಡಲಾಗಿದೆ.
ನ್ಯೂ ಯಾರ್ಕ್ ನಿಲ್ದಾಣದಿಂದ AA292 ಸಂಖ್ಯೆಯ ವಿಮಾನ ನವದೆಹಲಿಗೆ 199 ಪ್ಯಾಸೆಂಜರ್ ಹೊತ್ತು ಹೊರಟಿತ್ತು. ಈ ವೇಳೆ ವಿಮಾನದಲ್ಲಿ ಬಾಂಬ್ ಇಟ್ಟಿರೋದಾಗಿ ಬೆದರಿಕೆ ಸಂದೇಶ ರವಾನೆಯಾಗಿದ್ದು, ಭದ್ರತೆ ಹಿತದೃಷ್ಟಿಯಿಂದ ಎಚ್ಚೆತ್ತ ಅಧಿಕಾರಿಗಳು ರೋಮ್ ಗೆ ಡೈವರ್ಟ್ ಮಾಡಿದ್ದಾರೆ.
ನ್ಯೂಯಾರ್ಕ್‌ನಿಂದ ಟೇಕ್ ಆಫ್ ಆದ ಬಳಿಕ ಸ್ಫೋಟಿಸುವ ಬೆದರಿಕೆ ಹಾಕಲಾಗಿದೆ. ಏರ್ ಟ್ರಾಫಿಕ್ ಕಂಟ್ರೋಲ್ ಅಧಿಕಾರಿಗಳು ತಕ್ಷಣ ಎಚ್ಚೆತ್ತು ರೋಮ್ ಗೆ ಮಾರ್ಗ ಬದಲಿಸುವಂತೆ ಸೂಚನೆ ನೀಡಿದ್ದಾರೆ.
ಪ್ರಯಾಣಿಕರಿಗೆ ಬದಲಿ ವ್ಯವಸ್ಥೆ ಮಾಡಲು ಅಮೆರಿಕನ್ ಏರ್ ಲೈನ್ಸ್ ಅಧಿಕಾರಿಗಳು ಕ್ರಮಕೈಗೊಂಡಿದ್ದಾರೆ. ವಿವಿಧ ಆಯಾಮಗಳಲ್ಲಿ ಭದ್ರತಾ ಸಿಬ್ಬಂದಿ ತನಿಖೆ ನಡೆಸುತ್ತಿದ್ದು, ಇದೊಂದು ಫೇಕ್ ಬಾಂಬ್ ಬೆದರಿಕೆ ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ