ಪ್ರಗತಿವಾಹಿನಿ ಸುದ್ದಿ: ದೆಹಲಿಯಿಂದ ಟೊರೊಂಟೊಗೆ ತೆರಳುತ್ತಿದ್ದ ಏರ್ ಕೆನಡಾ ವಿಮಾನಕ್ಕೆ (AC43) ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ.
ಮಂಗಳವಾರ ರಾತ್ರಿ 10.50ರ ಸುಮಾರಿಗೆ ಟೇಕ್ ಆಫ್ ಆಗಬೇಕಿದ್ದ ವಿಮಾನವನ್ನು ಐಸೋಲೇಷನ್ ಗೆ ಬೇಗೆ ಕಳುಹಿಸಲಾಗಿತ್ತು, ಸುರಕ್ಷತೆ ದೃಷ್ಟಿಯಿಂದ ವಿಮಾನ ಸ್ಕ್ರೀನಿಂಗ್ ಪ್ರಕ್ರಿಯೆಯನ್ನು ನಡೆಸಲಾಯಿತು.
ಈ ವಿಮಾನದಲ್ಲಿ 306 ಪ್ರಯಾಣಿಕರಿದ್ದರು. ಸುದ್ದಿ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಶ್ವಾನದಳ, ಪೊಲೀಸರು, ಬಾಂಬ್ ನಿಷ್ಕ್ರಿಯದಳ ಆಗಮಿಸಿ ಪರಿಶೀಲನೆ ನಡೆಸಿದಾಗ ಇದು ಹುಸಿಬಾಂಬ್ ಸಂದೇಶ ಎಂದು ತಿಳಿದುಬಂದಿದೆ.
ಇದೀಗ ವಿಮಾನಗಳಿಗೆ ಬಾಂಬ್ ಬೆದರಿಕೆಗಳು ಹೆಚ್ಚಾಗಿ ಬರುತ್ತಿವೆ. ಪ್ಯಾರಿಸ್- ಮುಂಬೈ ವಿಸ್ತಾರಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿತ್ತು. ಫ್ರಾನ್ಸ್ ರಾಜಧಾನಿ ಪ್ಯಾರಿಸ್‌ನಿಂದ ಮುಂಬೈಗೆ 306 ಮಂದಿಯನ್ನು ಹೊತ್ತೊಯ್ಯುತ್ತಿದ್ದ ವಿಸ್ತಾರಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿತ್ತು. ಕಳೆದ ವಾರವಷ್ಟೆ ಇಂಡಿಗೋ ವಿಮಾನಕ್ಕೂ ಹುಸಿ ಬಾಂಬ ಬೆದರಿಕೆ ಕರೆ ಬಂದಿತ್ತು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ