ಪ್ರಗತಿವಾಹಿನಿ ಸುದ್ದಿ : ಮಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ಬಾಂಬ್ ಬೆದರಿಕೆ ಬಂದಿದೆ.
ವಿಮಾನ ನಿಲ್ದಾಣದಲ್ಲಿ ಕೆಲವೇ ಕ್ಷಣಗಳಲ್ಲಿ ಸ್ಫೋಟಗೊಳ್ಳಲಿದೆ ಎಂದು ಇ-ಮೇಲ್ ಸಂದೇಶ ಕಳುಹಿಸಿದ್ದಾರೆ. ಜೂ.18 ರಂದು ಮಧ್ಯಾಹ್ನ 12.43ಕ್ಕೆ ವಿಮಾನ ನಿಲ್ದಾಣದ ಇ-ಮೇಲ್ ಗೆ ಬೆದರಿಕೆ ಸಂದೇಶ ಬಂದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ವಿಮಾನ ನಿಲ್ದಾಣದ ಮುಖ್ಯ ಭದ್ರತಾ ಅಧಿಕಾರಿ ಬಜೆಪಿ ಠಾಣೆಗೆ ದೂರು ನೀಡಿದ್ದಾರೆ. ವಿಮಾನ ನಿಲ್ದಾಣದ ಆವರಣದಲ್ಲಿ ತಪಾಸಣೆ ನಡೆಸಿ, ಯಾವುದೇ ಆತಂಕ ಇಲ್ಲ ಎಂದು ಭದ್ರತಾ ಅಧಿಕಾರಿಗಳು ಖಚಿತ ಪಡಿಸಿದ್ದಾರೆ.
ದೇಶದ ಇತರ ವಿಮಾನ ನಿಲ್ದಾಣಗಳಿಗೂ ಇದೇ ರೀತಿಯ ಬೆದರಿಕೆ ಇಮೇಲ್ ಬಂದಿವೆ ಎಂದು ತಿಳಿದು ಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ