Kannada NewsKarnataka NewsNationalTravel

*ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ*

ಪ್ರಗತಿವಾಹಿನಿ ಸುದ್ದಿ: ಮಂಗಳೂರಿನ ವಿಮಾನ ನಿಲ್ದಾಣಕ್ಕೆ ರಾಮೇಶ್ವರಂ ಕೆಫೆ ಮಾದರಿಯಲ್ಲಿ ಬಾಂಬ್ ಬ್ಲಾಸ್ಟ್ ಮಾಡುವುದಾಗಿ ಬೆದರಿಕೆ ಸಂದೇಶವೊಂದು ಬಂದಿದೆ.

ನ. 30 ರಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಅಶ್ರಮ್ ವಾಯ್ಕರ್ ಎನ್ನುವ ಹೆಸರಲ್ಲಿ ಇಮೇಲ್‌ನಿಂದ ಬೆದರಿಕೆ ಸಂದೇಶ ಬಂದಿದೆ. ಈ ಬಗ್ಗೆ ಬಜಪೆ ಠಾಣೆಗೆ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ ಸಿಬ್ಬಂದಿ ದೂರು ನೀಡಿದ್ದಾರೆ.

ಮೇಲ್‌ನಲ್ಲಿ, ತಮಿಳುನಾಡಿನಲ್ಲಿ ಬಂಧನಕ್ಕೀಡಾಗಿರುವ ಡ್ರಗ್ ಕಿಂಗ್ ಪಿನ್ ಎನ್ನಲಾದ ಜಾಫರ್ ಸಾದಿರ್ ಮತ್ತು ಡಿಸಿಎಂ ಉದಯನಿಧಿ ಸ್ಟಾಲಿನ್ ಹಾಗೂ ನಿರ್ಮಾಪಕಿ ಶೃತಿಗಾ ಉದಯನಿಧಿ ಅವರ ಮೇಲಿರುವ ಕೇಸ್ ಅನ್ನು ವಾಪಸ್ ಪಡೆಯಬೇಕು. ಇದರ ಜೊತೆಗೆ ತಿರುಚ್ಚಿ ಸೆಂಟ್ರಲ್ ಜೈಲಿನಲ್ಲಿರುವ ಟಿಎನ್‌ಎಲ್ ಉಗ್ರ ಸಂಘಟನೆಯ ಮುಖ್ಯಸ್ಥ ಎಸ್. ಮಾರನ್ ಅವರನ್ನು ಬಿಡುಗಡೆ ಮಾಡಬೇಕು ಎನ್ನುವ ಬೇಡಿಕೆ ಇಡಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button