Kannada NewsKarnataka NewsNational

ಮುಂಬೈನ 50ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ

ಪ್ರಗತಿವಾಹಿನಿ ಸುದ್ದಿ: ಮುಂಬೈನ 50ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಬಂದಿದ್ದು, ಎಲ್ಲಡೆ ಕಟ್ಟರ್ ವಹಿಸಿಲಾಹಿದೆ. ಎಲ್ಲಾ ಆಸ್ಪತ್ರೆಗಳಿಗೂ ಸೂಕ್ತ ಭದ್ರತೆ ವದಗಿಸಲಾಗಿದೆಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ವಿಪಿಎನ್ ನೆಟ್ವರ್ಕ್ ಬಳಸಿ ಇ-ಮೇಲ್ ಸಂದೇಶವನ್ನು ಕಳುಹಿಸಲಾಗಿದೆ. ಆದರೆ ಇ-ಮೇಲ್ ಕಳುಹಿಸಿದ ದುಷ್ಕರ್ಮಿಗಳು ಯಾರೆಂಬ ಬಗ್ಗೆ ಮಾಹಿತಿ ಲಭಿಸಿಲ್ಲ ಮತ್ತು ಯಾಕಾಗಿ ಈ ಕೃತ್ಯ ಎಸಗಲು ಮುಂದಾಗಿದ್ದಾರೆ ಎಂಬ ನಿಖರ ಕಾರಣವೂ ತಿಳಿದುಬಂದಿಲ್ಲ. ಈ ಕುರಿತು ಹೆಚ್ಚಿನ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಸ್ಲೋಕ್, ರಹೇಜಾ, ಸೆವೆನ್ ಹಿಲ್ಸ್, ಕೊಹಿನೂರ್, ಕೆಇಎಂ, ಜೆಜೆ & ಸೇಂಟ್ ಜಾರ್ಜ್ ಸೇರಿದಂತೆ ಹಲವು ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆಯ ಇ-ಮೇಲ್ ತಲುಪಿದೆ ಎಂಬ ಮಾಹಿತಿ ಲಭಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button