
ಪ್ರಗತಿವಾಹಿನಿ ಸುದ್ದಿ; ಚೆನ್ನೈ; ಶಿವಕಾಶಿ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ನಾಲ್ವರು ಸಜೀವದಹನಗೊಂಡಿರುವ ಘಟನೆ ತಮಿಳುನಾಡಿನಲ್ಲಿ ಸಂಭವಿಸಿದೆ.
ಇಲ್ಲಿನ ವಿರುಧುನಗರದಲ್ಲಿನ ಪಟಾಕಿ ತಯಾರಿಕಾ ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿದ್ದು, ಸ್ಫೋಟದ ರಭಸಕ್ಕೆ ನಾಲ್ವರು ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ.
ಕಾರ್ಖಾನೆಯಲ್ಲಿ 30 ಜನರು ಕೆಲಸ ಮಾಡುತ್ತಿದ್ದರು. ಈ ವೇಳೆ ಕಾರ್ಖಾನೆಯ ಕೊಠಡಿಯೊಂದರಲ್ಲಿ ಏಕಾಏಕಿ ಸ್ಫೊಟ ಸಂಭವಿಸಿದೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.
ಪೊಲೀಸರ ಸೋಗಿನಲ್ಲಿ ಮನೆಗೆ ನುಗ್ಗಿ ಚಿನ್ನಾಭರಣ ಕದ್ದು ಪರಾರಿಯಾದ ಕಳ್ಳರು