ಪ್ರಗತಿವಾಹಿನಿ ಸುದ್ದಿ: ನಿನ್ನೆ ಮುಂಬೈನ ತಾಜ್ ಹೋಟೆಲ್ ಹಾಗೂ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ ಬಂದಿರುವುದು ಎಲ್ಲರಿಗೂ ಗೊತ್ತೇ ಇದೆ. ಇದೀಗ ಮತ್ತೆ ದೆಹಲಿಯಿಂದ ವಾರಣಾಸಿಗೆ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಸ್ಫೋಟಿಸುವ ಬೆದರಿಕೆ ಬಂದಿರುವುದಾಗಿ ವರದಿಯಾಗಿದೆ.
ಇಂದು ಮುಂಜಾಬೆ 5.35ಕ್ಕೆ ದೆಹಲಿಯಿಂದ ವಾರಣಾಸಿಗೆ ಹೋಗಬೇಕಿದ್ದ ವಿಮಾನಕ್ಕೆ ಬಾಂಬ್ ಬೆರದರಿಕೆ ಹಾಕಲಾಗಿದೆ. ತಕ್ಷಣವೇ ಎಚ್ಚೆತ್ತ ವಿಮಾನ ನಿಲ್ದಾಣದ ಭದ್ರತಾ ತಂಡ ಹಾಗೂ ಬಾಂಬ್ ನಿಷ್ಕ್ರಿಯ ತಂಡ ಪರಿಶೀಲನೆ ನಡೆಸಿತು. ಅಲ್ಲದೇ, ವಿಮಾನ ಪರಿಶೀಲನೆಗಾಗಿ ವಿಮಾನವನ್ನು ಪ್ರತ್ಯೇಕ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.
ಬಾಂಬ್ ಬೆದರಿಕೆ ಬರುತ್ತಿದ್ದಂತೆ ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರುನು ತುರ್ತು ಬಾಗಿಲಿನ ಮೂಲಕ ಸ್ಥಳಾಂತರಿಸಲಾಗಿದೆ. ಎಲ್ಲಾ ಪ್ರಯಾಣಿಕರ ಸುರಕ್ಷಿತವಾಗಿದ್ದಾರೆ ಎಂದು ದೆಹಲಿ ಅಗ್ನಿಶಾಮಕ ದಳ ತಿಳಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ