
ಪ್ರಗತಿವಾಹಿನಿ ಸುದ್ದಿ: ಭಾರತದ ಐದು ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿದೆ.
ದೆಹಲಿಯ ಕೆಂಪುಕೋಟೆ ಮೆಟ್ರೋ ನಿಲ್ದಾಣದ ಬಳಿ ಕಾರ್ ಬಾಂಬ್ ಸ್ಫೋಟ ಬೆನ್ನಲ್ಲೇ ದೇಶದ ಐದು ವಿಮಾನ ನಿಲ್ದಾಣಗಳಿಗೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಹಾಕಿದ್ದಾರೆ.
ದೆಹಲಿ, ಮುಂಬೈ, ಚೆನ್ನೈ, ತಿರುವನಂತಪುರಂ, ಹೈದರಾಬಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ರವಾನಿಸಲಾಗಿದೆ. ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣಗಳಲ್ಲಿ ಪೊಲೀಸರು, ಬಾಂಬ್ ಪತ್ತೆ ದಳ, ಬಾಂಬ್ ನಿಷ್ಕ್ರಿಯ ದಳದಿಂದ ಶೋಧ ಕಾರ್ಯ ನಡೆದಿದೆ. ವಿಮಾನ ನಿಲ್ದಾಣಗಳಲ್ಲಿ ತೀವ್ರ ತಪಾಸಣೆ ನಡೆಸಲಾಗಿದೆ.


