
ಪ್ರಗತಿವಾಹಿನಿ ಸುದ್ದಿ: ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಹಿನ್ನಲೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ನೂತನ ಸಂಸದ ಬಸವರಾಜ ಬೊಮ್ಮಾಯಿ ಅವರು ಇಂದು ರಾಜೀನಾಮೆ ನೀಡಿದ್ದಾರೆ. ಹಾವೇರಿ-ಗದಗ ಲೋಕಸಭಾ ಕ್ಷೇತ್ರದಿಂದ ಲೋಕಸಭಾ ಸದಸ್ಯರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಇಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಇದೇ ವೇಳೆ ಎನ್‌ಡಿಎ ಸರ್ಕಾರದಲ್ಲಿ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರಾಗಿ ಅಧಿಕಾರ ವಹಿಸಿಕೊಂಡಿರುವ ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಇಂದು ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ