ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ನಾಳೆ ಬೆಳಗ್ಗೆಯೇ ದೆಹಲಿಗೆ ಹೊರಟಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬುಧವಾರ ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ಬೆಳಗ್ಗೆ ದೆಹಲಿಗೆ ಹೋಗುತ್ತಿದ್ದೇನೆ. ಅಪಾಯಿಂಟ್ ಮೆಂಟ್ ಕೇಳಿದ್ದೇನೆ. ಬಹುತೇಕ ನಾಳೆ ಬೆಳಗ್ಗೆಯೇ ಹುಗುವುದು ನಿಶ್ಚಿತ ಎಂದು ಅವರು ತಿಳಿಸಿದ್ದಾರೆ.
ರಾಜ್ಯದಲ್ಲಿ ಸಂಪುಟ ವಿಸ್ತರಣೆ ಸಂಬಂಧ ತೀವ್ರ ಚಟುವಟಿಕೆಗಳು ನಡೆಯುತ್ತಿವೆ. ಸಚಿವಾಕಾಂಕ್ಷಿಗಳು ಕಳೆದ ಕೆಲವು ದಿನಗಳಿಂದ ಮುಖ್ಯಮಂತ್ರಿಗಳ ಮನೆ ಸುತ್ತುತ್ತಿದ್ದಾರೆ. ಹಾಗಾಗಿ ಮುಖ್ಯಮಂತ್ರಿಗಳ ಮೇಲೆ ಭಾರೀ ಒತ್ತಡ ಕೇಳಿಬರುತ್ತಿದೆ. ಇನ್ನೂ ವಿಳಂಬ ಮಾಡಿ ಸಂಪುಟ ವಿಸ್ತರಣೆ ಮಾಡಿದರೆ ಯಾವುದೇ ಪ್ರಯೋಜನವಿಲ್ಲ. ಮಾಡುವುದಾದರೆ ಬೇಗ ಮಾಡಬೇಕು ಎಂದು ಒತ್ತಾಯಿಸಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಬಸವರಾಜ ಬೊಮ್ಮಾಯಿ ದೆಹಲಿಗೆ ತೆರಳಿ ವರಿಷ್ಠರೊಂದಿಗೆ ಮಾತುಕತೆ ನಡೆಸಲಿದ್ದಾರೆ. ವಿಶೇಷವಾಗಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದಾರೆ.
ನಾಳೆ ದೆಹಲಿಗೆ ತೆರಳುವುದಾಗಿ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡುತ್ತಿದ್ದಂತೆ ರಾಜ್ ರಾಜಕೀಯದಲ್ಲಿ ಸಂಚಲನ ಉಂಟಾಗಿದೆ. ಸಚಿವಾಕಾಂಕ್ಷಿಗಳು ಬೆಂಗಳೂರಿನತ್ತ ಮುಖ ಮಾಡಿದ್ದಾರೆ.
ಸಂಸದರ ಸಭೆ
ಇದೇ ವೇಳೆ ದೆಹಲಿಯಲ್ಲಿ ಬಸವರಾಜ ಬೊಮ್ಮಾಯಿ ಬಜೆಟ್ ಪೂರ್ವಭಾವಿಯಾಗಿ ರಾಜ್ಯದ ಸಂಸದರ ಸಭೆ ನಡೆಸಲಿದ್ದಾರೆ. ಸಂಸದರೊಂದಿಗೆ ಬಜೆಟ್ ಕುರಿತು, ಕೇಂದ್ರದ ಯೋಜನೆಗಳ ಕುರಿತು ಸಂವಾದ ನಡೆಸಲಿದ್ದಾರೆ.
ಬಜೆಟ್ ಬೆನ್ನಲ್ಲೇ ಆಭರಣ ಪ್ರಿಯರಿಗೆ ಶಾಕ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ