*ಕೆಎಲ್ಇ ಸಂಸ್ಥೆಯ ಕ್ಯಾನ್ಸರ್ ಆಸ್ಪತ್ರೆಗೆ ಬೊಮ್ಮಾಯಿ ಭೇಟಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಕೆಎಲ್ ಇ ಸಂಸ್ಥೆಯ ಡಾ. ಸಂಪತಕುಮಾರ ಶಿವಣಗಿ ಕ್ಯಾನ್ಸರ ಆಸ್ಪತ್ರೆಗೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದರಾದ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಭೇಟಿ ನೀಡಿದರು.

ಕೆಎಲ್ಇ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಅವರು ಬೊಮ್ಮಾಯಿಯವರಿಗೆ ಆಸ್ಪತ್ರೆ ಹಾಗೂ ಅಲ್ಲಿರುವ ಅತ್ಯಾಧುನಿಕ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು. ಉತ್ತರ ಕರ್ನಾಟಕ, ದಕ್ಷಿಣ ಮಹಾರಾಷ್ಟ್ರ, ಗೋವಾ ಸೇರಿದಂತೆ ಈ ಭಾಗದ ರೋಗಿಗಳಿಗೆ ಆಸ್ಪತ್ರೆ ವರದಾನವಾಗಿದೆ. ಉತ್ತಮ ವೈದ್ಯಕೀಯ ತಂಡವಿದ್ದು, ಅತ್ಯಂತ ಕಾಳಜಿಯಿಂದ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಅರು ವಿವರಿಸಿದರು.
ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಎಂ.ವಿ.ಜಾಲಿ ಬೊಮ್ಮಾಯಿ ಅವರನ್ನು ಸ್ವಾಗತಿಸಿದರು. ಆಸ್ಪತ್ರೆಗೆ ಮುಂಬೈ ಮತ್ತು ಬೆಂಗಳೂರಿನಂತಹ ಮಹಾನಗರಗಳಿಂದಲೂ ರೋಗಿಗಳು ಬಂದು ಚಿಕಿತ್ಸೆ ಪಡೆಯುತ್ತಿದ್ದಾರೆ. ಮಹಾನಗರಗಳ ಸೌಲಭ್ಯವನ್ನು ಇಲ್ಲಿ ನೀಡಲಾಗುತ್ತಿದೆ ಎಂದು ಜಾಲಿ ವಿವರಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ