Kannada NewsKarnataka NewsLatest

ಕುಡಿದು ಬಂದಾ, ತಪಾಸಣೆ ಮಾಡುವಾಗ ಓಡಿ ಹೋದಾ: ಮತಗಟ್ಟೆ ಅಧಿಕಾರಿ ಶಿಕ್ಷಕ ಅಮಾನತು

ಪ್ರಗತಿವಾಹಿನಿ ಸುದ್ದಿ, ಸವದತ್ತಿ – ಕುಡಿದು ಬಂದ ಮತಗಟ್ಟೆ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ. ಸವದತ್ತಿ ರಾಯಣ್ಣ ನಗರದ ತೆಂಗಿನಹಾಳ ಪ್ರಾಥಮಿಕ ಶಾಲೆ ಶಿಕ್ಷಕ ಪ್ರಕಾಶ ವೀರಭದ್ರಪ್ಪ ನಾಶಿಪುಡಿ ಅಮಾನತುಗೊಂಡವರು.

ಇವರನ್ನು ಗೋಕಾಕ ವಿಧಾನಸಭಾ ಕ್ಷೇತ್ರದ ಮತಗಟ್ಟೆಯೊಂದಕ್ಕೆ ಚುನಾವಣಾಧಿಕಾರಿಯಾಗಿ ನೇಮಿಸಲಾಗಿತ್ತು. ಆದರೆ ಬೆಳ್ಳಂಬೆಳಗ್ಗೆ ಕುಡಿದು ತೂರಾಡುತ್ತ ಬಂದ. ಇದನ್ನು ಗಮನಿಸಿ ಆತನನ್ನು ಆಸ್ಪತ್ರೆಗೆ ಕರೆದೊಯ್ದು ತಪಾಸಣೆ ನಡೆಸಲಾಯಿತು. ಈ ವೇಳೆ ಅಲ್ಲಿಂದ ಓಡಿ ಪರಾರಿಯಾಗಿದ್ದಾನೆ.

ಈ ಹಿನ್ನೆಲೆಯಲ್ಲಿ, ಚುನಾವಣೆ ಕರ್ತವ್ಯ ಲೋಪ ಮತ್ತು ಅಶಿಸ್ತಿನ ಆರೋಪದ ಮೇಲೆ ಆತನನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

ಉಳಿದಂತೆ ಜಿಲ್ಲೆಯಲ್ಲಿ ಶಾಂತಿಯುತವಾಗಿ ಮತದಾನ ನಡೆಯುತ್ತಿದೆ. ಮತದಾನ ಅತ್ಯಂತ ನಿಧಾನಗತಿಯಲ್ಲಿ ಸಾಗುತ್ತಿದೆ.

Home add -Advt

Related Articles

Back to top button