CrimeKannada NewsKarnataka NewsLatest

*ರೌಡಿ ಶೀಟರ್‌ಗಳ ಜೊತೆ ಎಣ್ಣೆ ಪಾರ್ಟಿ: ಎಎಸ್‌ಐ ಸಸ್ಪೆಂಡ್*

ಪ್ರಗತಿವಾಹಿನಿ ಸುದ್ದಿ: ರೌಡಿ ಶೀಟರ್‌ಗಳ ಜೊತೆ ಬಾರ್‌ನಲ್ಲಿ ಪಾರ್ಟಿ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಕಡೂರು ತಾಲೂಕಿನ ಸಖರಾಯಪಟ್ಟಣ ಪೊಲೀಸ್ ಠಾಣೆಯ ಎಎಸ್‌ಐ ವೀರೇಂದ್ರ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ದಯ್ಮಾ ಅವರು ಎಎಸ್‌ಐ ವೀರೇಂದ್ರ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಕಡೂರು ತಾಲೂಕಿನ ಎಮ್ಮೆದೊಡ್ಡಿ ಮುಸ್ಲಾಪುರ ಗ್ರಾಮದಲ್ಲಿ ಸುಮಾರು ಒಂದು ವಾರದ ಹಿಂದೆ ಈ ಘಟನೆ ನಡೆದಿತ್ತು ಎನ್ನಲಾಗಿದೆ.

ಎಎಸ್‌ಐ ವೀರೇಂದ್ರ ಅವರು ಬಾರ್‌ನಲ್ಲಿ ಪಾರ್ಟಿ ಆಯೋಜಿಸಿ, ರಾತ್ರಿ ವೇಳೆ ಜೋರಾಗಿ ಹಾಡು ಹಾಕಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಸಂದರ್ಭದಲ್ಲಿ ರೌಡಿ ಶೀಟರ್‌ಗಳೊಂದಿಗೆ ಪಾರ್ಟಿ ನಡೆಸಿದ್ದರು ಎನ್ನಲಾಗಿದೆ. ಘಟನೆಯಿಂದ ಆಕ್ರೋಶಗೊಂಡ ಗ್ರಾಮಸ್ಥರು ಬಾರ್‌ ಮುಂದೆ ರಾತ್ರೋರಾತ್ರಿ ಪ್ರತಿಭಟನೆ ನಡೆಸಿದ್ದರು. ಬಾರ್‌ ಬಂದ್ ಮಾಡುವಂತೆ ಮಹಿಳೆಯರು ಸೇರಿದಂತೆ ನೂರಾರು ಗ್ರಾಮಸ್ಥರು ಒತ್ತಾಯಿಸಿದ್ದರು.

ಎಎಸ್‌ಐ ವಿರುದ್ಧ ನಿರಂತರವಾಗಿ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸ್ ಇಲಾಖೆ ಇದೀಗ ಅಮಾನತು ಕ್ರಮ ಕೈಗೊಂಡಿದೆ. ಘಟನೆಗೆ ಸಂಬಂಧಿಸಿದಂತೆ ಇಲಾಖಾ ಮಟ್ಟದಲ್ಲಿ ಮುಂದಿನ ಕ್ರಮ ಕೈಗೊಳ್ಳುವ ಸಾಧ್ಯತೆಯೂ ಇದೆ.

Related Articles

Back to top button