ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು (ಡಿ.14) ಮಧ್ಯಾಹ್ನ ದೆಹಲಿಗೆ ತೆರಳಲಿದ್ದಾರೆ.
ಮಧ್ಯಾಹ್ನ 1.30ಕ್ಕೆ ಹುಬ್ಬಳ್ಳಿ ಮೂಲಕ ದೆಹಲಿಗೆ ವಿಮಾನದಲ್ಲಿ ತೆರಳಲಿರುವ ಅವರು, ಸಂಜೆ 4ಕ್ಕೆ ದೆಹಲಿ ತಲುಪಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಲಿದ್ದಾರೆ.
ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಅಮಿತ್ ಶಾ ಅವರು ಇಂದೇ ಕರ್ನಾಟಕ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿಗಳ ಜತೆ ಚರ್ಚೆ ನಡೆಸಲಿದ್ದಾರೆ. ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಕೂಡ ಭಾಗವಹಿಸಲಿದ್ದಾರೆ.
ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವರ ಮಧ್ಯಸ್ಥಿಕೆಯಲ್ಲಿ ನಡೆಯಲಿರುವ ಸಮಾಲೋಚನೆ, ಪರಿಹಾರ ಕ್ರಮದ ವೇಳೆ ಕರ್ನಾಟಕದ ಪರ ತಮ್ಮ ನಿಲುವನ್ನು ಸಿಎಂ ಬೊಮ್ಮಾಯಿ ಸ್ಪಷ್ಟಪಡಿಸಲಿದ್ದು ಈ ಕುರಿತಂತೆ ಈಗಾಗಲೇ ಹಲವು ಕನ್ನಡ ಪರ ಸಂಘಟನೆಗಳು, ಮುಖಂಡರು ಯಾವ ಒತ್ತಡಕ್ಕೂ ಮಣಿಯದೆ ರಾಜ್ಯದ ಪರ ತಮ್ಮದೃಢ ನಿಲುವು ಪ್ರದರ್ಶಿಸುವ ನಿಟ್ಟಿನಲ್ಲಿ ಸಲಹೆ ಸೂಚನೆಗಳನ್ನು ನೀಡಿದ್ದಾರೆ.
ಗುರುವಾರ ದೆಹಲಿಯಿಂದ ವಿಮಾನ ಮೂಲಕ ಕೊಪ್ಪಳ ಜಿಲ್ಲೆಯ ಗಿಣಿಗೇರಾಕ್ಕೆ ಮುಖ್ಯಮಂತ್ರಿ ಆಗಮಿಸಲಿದ್ದಾರೆ ಎಂದು ಸಿಎಂ ಕಚೇರಿ ಅಧಿಕೃತ ಮೂಲಗಳು ತಿಳಿಸಿವೆ.
*ಭೀಕರ ಅಪಘಾತ: ಖ್ಯಾತ ಯಕ್ಷಗಾನ ಭಾಗವತ ತಿಮ್ಮಪ್ಪ ಹೆಗಡೆ ದುರ್ಮರಣ*
https://pragati.taskdun.com/yakshagana-bhagavatatimmappa-hegadedeathaacident/
*ನಟಿ ಅಭಿನಯ ಸೇರಿದಂತೆ ಮೂವರಿಗೆ ಜೈಲುಶಿಕ್ಷೆ; ಹೈಕೋರ್ಟ್ ಮಹತ್ವದ ತೀರ್ಪು*
https://pragati.taskdun.com/actress-abhinaya2-yers-jailhigh-courtdowry-harassment-case/
*754 ಕೋಟಿ ರೂ.ಗಳ ಕೆರೆ ತುಂಬಿಸುವ ಪ್ರಸ್ತಾವನೆಗೆ ಶೀಘ್ರ ಅನುಮೋದನೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
https://pragati.taskdun.com/sanction-for-filling-up-tanks-at-rs-754-crore-soon-cm-bommai/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ