Latest

ಬೆಂಗಳೂರಿನಲ್ಲಿ ಬೆಳ್ಳಂ ಬೆಳಿಗ್ಗೆ ಶೂಟೌಟ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮುಂಜಾನೆಯೇ ಗುಂಡಿನ ದಾಳಿ ನಡೆದಿದೆ. ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರ ಮೇಲೆ ಗುಂಡಿನ ದಾಳಿ ನಡೆಸಿ ಹಲ್ಲೆಗೆ ಯತ್ನಿಸಿರುವ ಘಟನೆ ಕೆ.ಆರ್ ಪುರಂ ನಲ್ಲಿ ನಡೆದಿದೆ.

ಐವರು ಅಪರಿಚಿತರು ರಿಯಲ್ ಎಸ್ಟೇಟ್ ಉದ್ಯಮಿ, ಆಟೋಡ್ರೈವರ್ ಬಾಬು ಎಂಬಾತನ ಮೇಲೆ ಫೈರಿಂಗ್ ನಡೆಸಿದ್ದಾರೆ. ಲಾಂಗು, ಮಚ್ಚುಗಳಿಂದ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಅಪಾಯದಿಂದ ಪಾರಾದ ರಿಯಲ್ ಎಸ್ಟೇಟ್ ಉದ್ಯಮಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Home add -Advt

ಗಾಯಾಳು ಬಾಬು, ಭೈರತಿ ಬಸವರಾಜ್ ಆಪ್ತ ಎಂದು ತಿಳಿದುಬಂದಿದೆ. ಸುಹೇಲ್ ಹಾಗೂ ಗುಂಪಿನಿಂದ ಈ ದಾಳಿ ನಡೆದಿದೆ. ಪ್ರಕರಣ ಸಂಬಂಧ ಕೆ ಆರ್ ಪುರಂ ಪೊಲೀಸರು ಕೆಲವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Related Articles

Back to top button