Belagavi NewsBelgaum NewsKannada NewsKarnataka NewsSports

*ಬೆಳಗಾವಿಯಲ್ಲಿ ಬಾಕ್ಸ್ ಕ್ರಿಕೆಟ್ ಮೈದಾನ ಉದ್ಘಾಟನೆಗೆ ಸಿದ್ದ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ, ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ, ಫೆ.06, 2026 ರಂದು ಬೆಳಗ್ಗೆ 10.30 ಗಂಟೆಗೆ ಶ್ರೀ ನಗರದಲ್ಲಿನ ಬಾಕ್ಸ್ ಕ್ರಿಕೇಟ್ ಮೈದಾನ ಉದ್ಘಾಟನೆ ಸಮಾರಂಭ ಜರುಗಲಿದೆ. 

ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಶಾಸಕರಾದ ಆಸೀಫ್ (ರಾಜು) ಸೇರ್ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.

ಸರ್ಕಾರಿ ಮುಖ್ಯ ಸಚೇತಕರಾದ ಅಶೋಕ ಪಟ್ಟಣ, ಕರ್ನಾಟಕ ಸರ್ಕಾರದ ಮಾನ್ಯ ವಿಶೇಷ ಪ್ರತಿನಿಧಿ 2 ನವದೆಹಲಿ ಪ್ರಕಾಶ ಹುಕ್ಕೇರಿ, ವಾಯುವ್ಯ ಸಾರಿಗೆ ನಿಗಮ ನಿಯಮಿತ ಅಧ್ಯಕ್ಷರಾದ ಭರಮಗೌಡ ಕಾಗೆ ಮತ್ತು ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ ಅಧ್ಯಕ್ಷರಾದ ಮಹಾಂತೇಶ ಕೌಜಲಗಿ, ಜವಾಹರ ಬಾಲಾಭವನ ಸೊಸೈಟಿಯ ಅಧ್ಯಕ್ಷರಾದ ಬಿ. ರ್.ನಾಯ್ಡು ಅವರುಗಳು ವಿಶೇಷ ಆಮಂತ್ರಿತರಾಗಿ ಆಗಮಿಸಲಿದ್ದಾರೆ.

ರಾಜ್ಯ ಸಭೆ ಸಂಸದರಾದ ಈರಣ್ಣ ಕಡಾಡಿ, ಚಿಕ್ಕೋಡಿ ಲೋಕ ಸಭಾ ಸಂಸದರಾದ ಪ್ರಿಯಾಂಕಾ ಜಾರಕಿಹೊಳಿ, ಜಿಲ್ಲಾ ಲೋಕ ಸಭಾ ಸಂಸದರಾದ ಜಗದೀಶ್ ಶೆಟ್ಟರ, ಉತ್ತರ ಕನ್ನಡ ಲೋಕ ಸಭಾ ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರುಗಳು ಗೌರವಾನ್ವಿತ ಅತಿಥಿಗಳಾಗಿ ಆಗಮಿಸಲಿದ್ದಾರೆ.

Home add -Advt

ಜಿಲ್ಲೆಯ ಎಲ್ಲ ಸಂಸದರು, ಶಾಸಕರು, ಪರಿಷತ್ ಸದಸ್ಯರು, ಜನಪ್ರತಿಧಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

Related Articles

Back to top button