
ಪ್ರಗತಿವಾಹಿನಿ ಸುದ್ದಿ: ನಾಲ್ಕು ವರ್ಷದ ಬಾಲಕನೊಬ್ಬ ಬಾವಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.
ಇಲ್ಲಿನ ಸಿರಗುಪ್ಪ ತಾಲೂಕಿನ ರಾವಿಹಾಳ್ ಗ್ರಾಮದಲ್ಲಿ ಈ ದುರಂತ ನಡೆದಿದೆ. ನಾಲ್ಕು ವರ್ಷದ ಸಿರಿ ಮೃತ ಬಾಲಕ. ಮನೆ ಬಳಿ ಆಟವಾಡುತ್ತಿದ್ದ ಬಾಲಕ ಎರಡು ದಿನಗಳಿಂದ ಕಾಣೆಯಾಗಿದ್ದ. ಪೋಷಕರು ಆತನಿಗಾಗಿ ತೀವ್ರ ಹುಡುಕಾಟ ನಡೆಸಿದ್ದರು. ಆದರೆ ಎಲ್ಲಿಯೂ ಪತ್ತೆಯಾಗಿರಲಿಲ್ಲ. ಇದೀಗ ಬಾಲಕನ ಮೃತದೇಹ ಬಾವಿಯಲ್ಲಿ ಪತ್ತೆಯಗೈದೆ.
ಬಾಲಕನ ಶವ ಬಾವಿಯಲ್ಲಿ ತೇಲುತ್ತಿರುವುದನ್ನು ಕಂಡು ಕುಟುಂಬದವರು ಆಘಾತಗೊಂಡಿದ್ದಾರೆ. ಬಾವಿಗೆ ಯಾವುದೇ ಕಟ್ಟೆ ಇರಲಿಲ್ಲ ಇದರಿಂದ ಆಟವಾಡುವಾಗ ಬಾಲಕ ಆಕಸ್ಮಿಕವಾಗಿ ಬಾವಿಗೆ ಬಿದ್ದು ಸಾವನ್ನಪ್ಪಿರಬಹುದು ಎನ್ನಲಾಗಿದೆ.