
ಪ್ರಗತಿವಾಹಿನಿ ಸುದ್ದಿ: ಟ್ಯೂಷನ್ ಗೆ ಹೋಗಿದ್ದ ಬಾಲಕನನ್ನು ಕಿಡ್ನ್ಯಾಪ್ ಮಾಡಿ ದುಷ್ಕರ್ಮಿಗಳು ಹತ್ಯೆಗೈದಿರುವ ಘಟನೆ ಬೆಂಗಳೂರಿನ ಆನೇಕಲ್ ನಲ್ಲಿ ನಡೆದಿದೆ.
13 ವರ್ಷದ ನಿಶ್ಚಿತ್ ಹತ್ಯೆಯಾಗಿರುವ ಬಾಲಕ. ಬುಧವಾರ ಸಂಜೆ ಅರಕೆರೆ ಶಾಂತಿನಿಕೇತನ ಬಡಾವಣೆ ಬಳಿ ದುಷ್ಕರ್ಮಿಗಳು ಟ್ಯೂಷನ್ ಕ್ಲಾಸ್ ನಿಂದ ಬರುತ್ತಿದ್ದ ಬಾಲಕನನ್ನು ಕಿಡ್ನ್ಯಾಪ್ ಮಾಡಿದ್ದಾರೆ. ಬಾಲಕನ ತಂದೆ ಪ್ರತಿಷ್ಠಿತ ಕಾಲೇಜಿನಲ್ಲಿ ಪ್ರೊಫೆಸರ್. ಬಾಲಕನನ್ನು ಅಪಹರಿಸಿ 5 ಲಕ್ಷ ರೂಪಾಯಿ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ.
ದುಷ್ಕರ್ಮಿಗಳ ಕರೆ ಬರುತ್ತಿದ್ದಂತೆ ಪೋಷಕರು ಹುಳಿಮಾವು ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಬಾಲಕನ ಪತ್ತೆಗಾಗಿ ಹುಡುಕಾಟ ನಡೆಸಿದ್ದಾರೆ. ಆರೋಪಿಗಳಿಗಾಗಿ ಬಲೆ ಬೀಸಿದ್ದಾಗಲೇ ಬಾಲಕನ ಮೃತದೇಹ ಕಗ್ಗಲಿಪುರ ರಸ್ತೆಯ ನಿರ್ಜನಪ್ರದೇಶದಲ್ಲಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಪ್ರಕರಣ ಸಂಬಂಧ ಕಗ್ಗಲೀಪುರ ಪೊಲೀಸರು ಇಬ್ಬರು ಆರೋಪಿಗಳ ಕಾಲಿಗೆ ಗುಂಡೇಟು ಹೊಡೆದು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆಸದ್ಯ ಹುಲಿಮಾವು ಪೊಲೀಸರು ಆರೋಪಿಗಳ ಬಂಧನಕ್ಕಾಗಿ ಶೋಧ ನಡೆಸಿದ್ದಾರೆ.