*ಪಟಾಕಿ ಎಂದು ಸಿಡಿಮದ್ದಿಗೆ ಬೆಂಕಿ ಹಚ್ಚುತ್ತಿದಂತೆ ಸ್ಫೋಟ*: *ಬಾಲಕ ಸಾವು*

ಪ್ರಗತಿವಾಹಿನಿ ಸುದ್ದಿ: ದೀಪಾವಳಿ ಸಂಭ್ರಮಾಚರಣೆ ವೇಳೆ ಪಟಾಕಿ ಸಿಡಿಸುವಾಗ ಸಾಲು ಸಾಲು ಅನಾಹುತಗಳು ಸಂಭವಿಸುತ್ತಿವೆ. ಇಲ್ಲೋರ್ವ ಬಾಲಕ ಪಟಾಕಿ ಎಂದು ಭಾವಿಸಿ ಸಿಡಿಮದ್ದಿಗೆ ಬೆಂಕಿ ಹಚ್ಚಿದ್ದು, ಭೀಕರ ಸ್ಫೋಟಕ್ಕೆ ಬಲಿಯಾಗಿರುವ ಘಟನೆ ನಡೆದಿದೆ. ದೀಪಾವಳಿ ಹಬ್ಬದ ದಿನವೇ ಬಾಲಕ ಸಾವನ್ನಪ್ಪಿದ್ದು, ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ. ದೀಪಾವಳಿ ಪಟಾಕಿ ಎಂದು ಕಾಡುಹಂದಿಗಳಿಗಾಗಿ ತಂದಿಟ್ಟಿದ್ದ ಸ್ಫೋಟಕ ಸಿಡಿಮದ್ದಿಗೆ ಬೆಂಕಿ ಹಚ್ಚಿದ 15 ವರ್ಷದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಭೀಮರಾಯ ಮೃತ ಬಾಲಕ. ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಹಂದರಕಿ … Continue reading *ಪಟಾಕಿ ಎಂದು ಸಿಡಿಮದ್ದಿಗೆ ಬೆಂಕಿ ಹಚ್ಚುತ್ತಿದಂತೆ ಸ್ಫೋಟ*: *ಬಾಲಕ ಸಾವು*