
ಪ್ರಗತಿವಾಹಿನಿ ಸುದ್ದಿ: ಸಿಡಿಲು ಬಡಿದು 10 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ಆಳಂದ ತಾಲೂಕಿನ ನರೋಣ ಗ್ರಾಮದಲ್ಲಿ ನಡೆದಿದೆ.
ಕಲಬುರ್ಗಿ ಜಿಲ್ಲೆಯಾದ್ಯಂತ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು, ಅಲ್ಲಲ್ಲಿ ಸಿಡಿಲು ಬಡಿದಿದೆ. ಸಿಡಿಲು ಬಡಿದು ಬಾಲಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ.
10 ವರ್ಷದ ಮಹೇಶ್ ಮೃತ ಬಾಲಕ. ಜಮೀನಿನಿಂದ ಮನೆಗೆ ಎತ್ತಿನಗಾಡಿಯಲ್ಲಿ ಬರುತ್ತಿದ್ದ ಈ ವೇಳೆ ಏಕಾಏಕಿ ಬಿರುಗಾಳಿ, ಮಳೆ ಸಿಡಿಲು ಆರಂಭಾವಗಿದೆ. ಈ ವೇಳೆ ಈ ದುರಂತ ಸಂಭವಿಸಿದೆ. ನರೋಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ