
ಪ್ರಗತಿವಾಹಿನಿ ಸುದ್ದಿ; ಮೈಸೂರು: ಆಟವಾಡುತ್ತಿದ್ದ ಸಂದರ್ಭದಲ್ಲಿ ಇಬ್ಬರು ಬಾಲಕರ ನಡುವೆ ಜಗಳ ಆರಂಭವಾಗಿ ಕೊಲೆಯಲ್ಲಿ ಅಂತ್ಯವಾದ ಘಟನೆ ಮೈಸೂರಿನಲ್ಲಿ ನಡೆದಿದೆ.
17 ವರ್ಷದ ಫರ್ವೇಜ್ ಖಾನ್ ಮೃತ ಬಾಲಕ. 15 ವರ್ಷದ ಬಾಲಕನೊಬ್ಬ ಚಾಕುವಿನಿಂದ ಇರಿದು ಫರ್ವೇಜ್ ನನ್ನು ಕೊಲೆಗೈದಿದ್ದಾನೆ.
ಆಟವಾಡುತ್ತಿದ್ದ ವೇಳೆ ಇಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದಿದೆ. ಕೋಪದಲ್ಲಿ ಬಾಲಕ ಫರ್ವೇಜ್ ನನ್ನು ಚಾಕುವಿನಿಂದ ಇರಿದಿದ್ದು, ಫರ್ವೇಜ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಮೈಸೂರಿನ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರನ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ