Karnataka News

ಸಿಇಟಿ ಬರೆಯಲು ಬಂದ ವಿದ್ಯಾರ್ಥಿಗೆ ಜನಿವಾರ ತೆಗೆಸಿದ ಆರೋಪ; ಪರೀಕ್ಷಾ ಕೇಂದ್ರದ ಸಿಬ್ಬಂದಿಗಳ ವಿರುದ್ಧ ಆಕ್ರೋಶ

ಪ್ರಗತಿವಾಹಿನಿ ಸುದ್ದಿ: ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗೆ ಬಲವಂತವಾಗಿ ಜನಿವಾರ ತೆಗೆಸಿ ಪರೀಕ್ಷಾ ಕೇಂದ್ರದಕ್ಕೆ ಹೋಗಲು ಪರೀಕ್ಷಾ ಕೇಂದ್ರ ಸಿಬ್ಬಂದಿ ಅವಕಾಶ ನೀಡಿದ್ದು, ಸಿಬ್ಬಂದಿಗಳ ವರ್ತನೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.

Home add -Advt

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆದಿಚುಂಚನಗಿರಿ ಕಾಲೇಜಿನ ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ಎರಡನೇ ದಿನದ ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗೆ ಪರೀಕ್ಷಾ ಕೇಂದ್ರದ ಸಿಬ್ಬಂದಿ ಜನಿವಾರ ತೆಗೆದು ಪರೀಕ್ಷಾ ಕೇಂದ್ರಕ್ಕೆ ಹೋಗಲು ಹೇಳಿದ್ದಾರೆ. ಅದಕ್ಕೆ ವಿದ್ಯಾರ್ಥಿ ಇದು ಗಾಯತ್ರಿ ದೀಕ್ಷೆಯಿಂದ ಹಾಕಿರುವ ಜನಿವಾರ. ಇದನ್ನು ತೆಗೆಲ್ಲ ಎಂದಿದ್ದಾನೆ. ಆದರೂ ಒಪ್ಪದ ಪರೀಕ್ಷಾ ಕೇಂದ್ರದ ಸಿಬ್ಬಂದಿ ಜನಿವಾರವನ್ನು ಬಲವಂತವಾಗಿ ತೆಗೆಸಿದ್ದಾರೆ. ಅಲ್ಲದೇ ವಿದ್ಯಾರ್ಥಿ ಕೈಲಿದ್ದ ಕಾಶಿದಾರವನ್ನು ತೆಗೆಸಿದ್ದಾರೆ.

ಪರೀಕ್ಷಾ ಕೇಂದ್ರದ ಸಿಬ್ಬಂದಿ ನಡೆಗೆ ಬ್ರಾಹ್ಮಣ ಮಹಾಸಭಾ, ವಿಪ್ರ ಸಂಘಟನೆ ಆಕ್ರೋಶ ವ್ಯಕ್ತಪಡಿಸಿದ್ದು, ಪರೀಕ್ಷಾ ಕೇಂದ್ರದ ಅಧಿಕಾರಿಗಳು, ಸಿಬ್ಬಂದಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ.

Related Articles

Back to top button