ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹೊಸ ಪಡಿತರ ಕಾರ್ಡ್ ವಿತರಣೆ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಸಚಿವರು, ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣಕ್ಕೆ ರೇಷನ್ ಕಾರ್ಡ್ ವಿತರಣೆ ಸ್ಥಗಿತಗೊಳಿಸಲಾಗಿತ್ತು. ಈಗ ಹೊಸ ಪಡಿತರ ಕಾರ್ಡ್ ವಿತರಣೆಗೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಅನ್ನಭಾಗ್ಯದ ಉದ್ದೇಶ ಹಸಿದವರಿಗೆ ಅನ್ನ ಕೊಡಬೇಕು ಎಂಬುದು. ಈವರೆಗೆ ಒಂದು ಕೋಟಿ ಕುಟುಂಬದವರಿಗೆ ಅನ್ನಭಾಗ್ಯ ಹಣ ಹಾಕಲಾಗಿದೆ. ಇದರಿಂದ 3.50 ಕೋಟಿ ಫಲಾನುಭವಿಗಳಿಗೆ ಅನುಕೂಲವಾಗಲಿದೆ ಎಂದರು.
ಇದೇ ವೇಳೆ ವೈಟ್ ಬೋರ್ಡ್ ಕಾರ್ ಇರುವವರಿಗೆ ಬಿಪಿಎಲ್ ಕಾರ್ಡ್ ಇಲ್ಲ, ಯೆಲ್ಲೋ ಬೋರ್ಡ್ ಕಾರ್ ಇದ್ದರೆ ಬಿಪಿಎಲ್ ಕಾರ್ಡ್ ನೀಡಲಾಗುವುದು. ಈ ಬಗ್ಗೆ ಚರ್ಚಿಸಿ ಶೀಘ್ರದಲ್ಲಿಯೇ ನಿರ್ಧಾರ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ