
ಪ್ರಗತಿವಾಹಿನಿ ಸುದ್ದಿ: ಬಿಪಿಎಲ್ ಕಾರ್ಡ್ ಗಳ ರದ್ದು ವಿಚಾರ ರಾಜ್ಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದ್ದು, ಈ ಬಗ್ಗೆ ಸಾಕಷ್ಟು ಗೊಂದಲಗಳು ಆರಂಭವಾಗಿವೆ. ಈ ಹಿನ್ನೆಲೆಯಲ್ಲಿ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ, ಯಾವುದೇ ಬಿಪಿಎಲ್ ಕಾರ್ಡ್ ರದ್ದು ಪಡಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಮುನಿಯಪ್ಪ, ಅರ್ಹರ ಬಿಪಿಎಲ್ ಕಾರ್ಡ್ ಗಳನ್ನು ಸರ್ಕಾರ ರದ್ದುಪಡಿಸಿಲ್ಲ. ಮಾನದಂಡಗಳ ಅನ್ವಯ ಪರಿಷ್ಕರಣೆ ಮಾಡಲಾಗಿದೆ. ಕೇಂದ್ರ ಸರ್ಕಾರದ ನಿಯಮಗಳ ಪ್ರಕಾರ ಪರಿಷ್ಕರಣೆ ನಡೆಯುತ್ತಿದೆ. ಯಾವುದೇ ಅರ್ಹ ಬಿಪಿಎಲ್ ಕಾರ್ಡ್ ರದ್ದು ಮಡುವುದಿಲ್ಲ. ಅನರ್ಹರು ಎನ್ನುವವರನ್ನು ಎಪಿಎಲ್ ಗೆ ಬದಲಾವಣೆ ಮಾಡಲಾಗುತ್ತದೆ ಎಂದರು.
ಆದಾಯ ತೆರಿಗೆ, ಸರ್ಕಾರಿ ನೌಕರರರನ್ನು ಹೊರತುಪಡಿಸಿ ಉಳಿದವರಿಗೆ ಬಿಪಿಎಲ್ ಕಾರ್ಡ್ ನೀಡಲಾಗುತ್ತದೆ. ಈ ಬಗ್ಗೆ ಯಾವುದೇ ಗೊಂದಲಗಳು ಬೇಡ ಎಂದು ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ