Belagavi NewsBelgaum News

*ಅಂತ್ಯೋದಯ ಮತ್ತು ಬಿಪಿಎಲ್ ಪಡಿತರ ಚೀಟಿಯನ್ನು ಹಿಂದಿರುಗಿಸಲು ಆದೇಶ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ತಾಲೂಕಿನಲ್ಲಿ ಪ್ರಸ್ತುತ ಚಾಲ್ತಿಯಲ್ಲಿರುವ ಪಡಿತರ ಚೀಟಿದಾರರು, ವೇತನವನ್ನು ಗಣನೆಗೆ ತೆಗೆದುಕೊಳ್ಳದೇ ಎಲ್ಲಾ ಖಾಯಂ ನೌಕರರು ಅಂದರೆ ಸರ್ಕಾರದ ಅಥವಾ ಸರ್ಕಾರದಿಂದ ಅನುದಾವನ್ನು ಪಡೆಯುತ್ತಿರುವ ಸಂಸ್ಥೆಗಳು ಅಥವಾ ಸರ್ಕಾರಿ ಪ್ರಾಯೋಜಿತ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ಮಂಡಳಿಗಳು, ನಿಗಮಗಳು, ಸ್ವಾಯುತ್ತ ಸಂಸ್ಥೆಗಳು ಇತ್ಯಾದಿ ಒಳಗೊಂಡತೆ ಆಧಾಯ ತೆರೆಗೆ, ಸೇವಾ ತೆರಿಗೆ, ವ್ಯಾಟ್, ವೃತ್ತಿ ತೆರಿಗೆ ಪಾವತಿಸುವ ಎಲ್ಲಾ ಕುಟುಂಬಗಳು, ಗ್ರಾಮೀಣ ಪ್ರದೇಶದಲ್ಲಿ 3 ಹೆಕ್ಟೇ‌ರ್ ಒಣಭೂಮಿ, ತತ್ಸಮಾನ ನಿರಾವರಿ ಭೂಮಿ ಹೊಂದಿರುವ ಕುಟುಂಬಗಳು, ಗ್ರಾಮೀಣ ಪ್ರದೇಶವನ್ನು ಹೊರತುಪಡಿಸಿ ನಗರ ಪ್ರದೇಶಗಳಲ್ಲಿ 1000 ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆಯನ್ನು ಸ್ವಂತವಾಗಿ ಹೊಂದಿರುವ ಕುಟುಂಬಗಳು, ಜೀವನೋಪಾಯಕ್ಕಾಗಿ ಸ್ವತ ಓಡಿಸುವ ನಾಲ್ಕು ಚಕ್ರದ ವಾಹನಗಳನ್ನು ಹೊಂದಿರುವ ಎಲ್ಲಾ ಕುಟುಂಬಗಳು, ವಾರ್ಷಿಕ ಆಧಾಯ ರೂ 1.20 ಲಕ್ಷಗಳಿಗಿಂತ ಹೆಚ್ಚು ಇರುವ ಕುಟುಂಬಗಳು ಅಂತ್ಯೋದಯ ಪಡಿತರ ಚೀಟಿ ಹಾಗೂ ಆದ್ಯತಾ (ಬಿಪಿಎಲ್) ಪಡಿತರ ಚೀಟಿ ಪಡೆಯಲು ಅನರ್ಹರಾಗಿರುತ್ತಾರೆ.

ಅನರ್ಹರು, ಸಕಾರಿ ನೌಕರರು ಅಥವಾ ಅವರ ಕುಟುಂಬದ ಇನ್ನಿತರೇ ಸದಸ್ಯರುಗಳ ಹೆಸರಿನಲ್ಲಿ ಹೊಂದಿರುವ ಅಂತ್ಯೋದಯ ಮತ್ತು ಬಿಪಿಎಲ್ ಪಡಿತರ ಚೀಟಿಯನ್ನು ಸೇವೆಗೆ ಸೇರಿದ ಪ್ರಮಾಣ ಪತ್ರದ ಪ್ರತಿ ಹಾಗೂ ಪಡಿತರ ಚೀಟಿ ಆಹಾರ ಶಾಖೆಗೆ ಹಿಂದಿರುಗಿಸುವಂತೆ ಎಚ್ಚರಿಕೆ ನೀಡಲಾಗಿದ್ದು, ತಪ್ಪಿದಲ್ಲಿ ದಂಡವನ್ನು ವಿಧಿಸಿ ಕಾನೂನು ರೀತ್ಯ ಕ್ರಮವಹಿಸಲಾಗುತ್ತದೆ ಎಂದು ಬೆಳಗಾವಿ ತಹಶೀಲ್ದಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button