Latest

ಬಿಪಿಎಲ್ ಕಾರ್ಡ್ ರದ್ದು; ಸ್ಪಷ್ಟನೆ ನೀಡಿದ ಸಚಿವ ಉಮೇಶ ಕತ್ತಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಟಿವಿ, ಫ್ರಿಡ್ಜ್, ಬೈಕ್ ಹೊಂದಿದ್ದವರು ಬಿಪಿಎಲ್ ಕಾರ್ಡ್ ಹಿಂದಿರುಗಿಸಬೇಕು ಎಂಬ ಹೇಳಿಕೆ ತೀವ್ರ ವಿವಾದಕ್ಕೀಡಾದ ಬೆನ್ನಲ್ಲೇ ಸಚಿವ ಉಮೇಶ್ ಕತ್ತಿ ಸ್ಪಷ್ಟನೆ ನೀಡಿದ್ದು, ಬಿಪಿಎಲ್ ಕಾರ್ಡ್ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಉಮೇಶ್ ಕತ್ತಿ, ನಾನು ಸಚಿವನಾದ ಬಳಿಕ ಯಾವುದೇ ತಿದ್ದುಪಡಿ ಮಾಡಿಲ್ಲ. ಮುಂದೆ ಸಹ ಮಾಡಲ್ಲ. ಈಗ ಜಾರಿಯಲ್ಲಿರುವ ಮಾನದಂಡಗಳೇ ಮುಂದುವರಿಯುತ್ತದೆ ಎಂದಿದ್ದಾರೆ.

ಟಿವಿ, ಫ್ರಿಡ್ಜ್, ಬೈಕ್ ಇರುವವರಿಗೆ ಬಿಪಿಎಲ್ ಕಾರ್ಡ್ ರದ್ದು ಎಂದು ಸಚಿವ ಕತ್ತಿ ಹೇಳಿಕೆಗೆ ಸ್ವಪಕ್ಷೀಯ ನಾಯಕರೇ ವಿರೋಧ ವ್ಯಕ್ತಪಡಿಸಿದ್ದರು. ಸಚಿವರ ನಿರ್ಧಾರಕ್ಕೆ ರಾಜ್ಯಾದ್ಯಂತ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಸ್ಪಷ್ಟಪಡಿಸಿರುವ ಸಚಿವ ಉಮೇಶ್ ಕತ್ತಿ, ಬಿಪಿಎಲ್ ಕಾರ್ಡ್ ಮಾನದಂಡಗಳಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ತಿಳಿಸಿದ್ದಾರೆ.

ಸಚಿವ ಉಮೇಶ್ ಕತ್ತಿ ಹೇಳಿಕೆಗೆ ಸ್ವಪಕ್ಷೀಯರಿಂದಲೇ ವಿರೋಧ

Home add -Advt

ಟಿವಿ, ಫ್ರಿಡ್ಜ್, ಬೈಕ್ ಇದ್ದರೆ ಬಿಪಿಎಲ್, ಪಡಿತರ ರದ್ದು

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button