Karnataka NewsPolitics

*ಭಯಾನಕ ಭವಿಷ್ಯ ನುಡಿದ ಬ್ರಹ್ಮಾಂಡ ಗುರೂಜಿ*

ಪ್ರಗತಿವಾಹಿನಿ ಸುದ್ದಿ: 3ನೇ ಮಹಾಯುದ್ಧ ದೇಶದ ಪ್ರಧಾನಿ ಬದಲಾವಣೆ, ಕರ್ನಾಟಕ ಮೂರು ಭಾಗವಾಗಲಿದೆ ಎಂದು ಹಾಸನದಲ್ಲಿ ಬ್ರಹ್ಮಾಂಡ ಗುರೂಜಿ ಭವಿಷ್ಯ ನುಡಿದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಮಂತ್ರಿಗಳು 2 ವರ್ಷ ಅವಧಿಯಲ್ಲಿ ಕೇವಲ ಒಂದೂವರೆ ವರ್ಷ ಮಾತ್ರ ಪ್ರಧಾನಿಯಾಗಿ ಉಳಿಯುತ್ತಾರೆ. ಬಳಿಕ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಆಶ್ರಮ ಸೇರಲಿದ್ದಾರೆ. ಈ ರಾಜಕೀಯ ಹೊಲಸು ಸರಿಮಾಡಲು ಸಾಕಷ್ಟು ಪ್ರಯತ್ನ ನಡೆಸಿದರು. ಆದರೆ ಏನೂ ಬದಲಾವಣೆ ಆಗದೆ ಬೇಜಾರಾಗಿ ರಾಜೀನಾಮೆ ನೀಡಬಹುದು ಅಥವಾ ಬೇರೆಯೇ ಆಯ್ಕೆ ಮಾಡಿಕೊಳ್ಳಬಹುದು. ಮುಂದೆ ಒಬ್ಬ ಸನ್ಯಾಸಿ ಜಗತ್ತನ್ನು ಆಳಲಿದ್ದಾರೆ ಎಂದರು.

ಕರ್ನಾಟಕ ಮೂರು ಭಾಗ ಆಗೋದು ಶತಸಿದ್ದ. ಕರ್ನಾಟಕ, ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ ಹೀಗೆ ಮೂರು ಭಾಗ ಆಗಲಿದೆ. ಮೂವರು ಮುಖ್ಯಮಂತ್ರಿಗಳಾಗಲಿದ್ದಾರೆ. ಇದು 2025 ರಿಂದ 2032ರವರೆಗೆ ನಡೆಯಲಿದೆ ಎಂದರು.

2025 2026ಕ್ಕೆ ಮೂರನೇ ಮಹಾಯುದ್ಧ ನಡೆಯಲಿದ್ದು, 13 ಮುಸ್ಲಿಂ ರಾಷ್ಟ್ರಗಳು ಭಾರತದ ಮೇಲೆ ಮಾಡಲಿದ್ದಾರೆ. ಭಾರತ ದೇಶ ಮತ್ತೆ ಎರಡು ಭಾಗ ಆಗಲಿದೆ. ಇದರ ನಡುವೆ ಬಾಂಗ್ಲಾದೇಶ-ಚೈನಾ ಕುತಂತ್ರ ಮಾಡಿ ಭಾರತ ದೇಶದ ಮೇಲೆ ದಾಳಿ ಮಾಡಲಿವೆ. ನಮಗೆ ಅಮೆರಿಕದಿಂದಾಗಲಿ ಬೇರೆ ಯಾವ ದೇಶದಿಂದ ಸಹಾಯ ಸಿಗುವುದಿಲ್ಲ. ರಷ್ಯಾವೊಂದೇ ಸಹಾಯ ಮಾಡಲಿದೆ ಎಂದರು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button